ಪ್ರಕರಣದ ತನಿಖೆಗಾಗಿ ಬಂದ ಪೊಲೀಸ್ ಮೇಲೆ ಹಲ್ಲೆ, ನಾಲ್ವರ ಬಂಧನ

Two police personnel were injured after a mob attack

ಕನ್ನಡ ನ್ಯೂಸ್ ಟುಡೇ

ಅಸ್ಸಾಂ : ಇಲ್ಲಿನ ನಾಗಾಂವ್ ಜಿಲ್ಲೆಯಲ್ಲಿ ಪೊಲೀಸರ ಮೇಲೆ ಜನಸಮೂಹ ಹಲ್ಲೆ ನಡೆಸಿದ್ದರಿಂದ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ . ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರು ಜನಸಮೂಹದಿಂದ ಬಾರೀ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

“ಜನವರಿ 24 ರಂದು ಕೌಟುಂಬಿಕ ದೌರ್ಜನ್ಯ ಪ್ರಕರಣದ ತನಿಖೆಗಾಗಿ ಪೊಲೀಸರು ಗ್ರಾಮಕ್ಕೆ ಹೋದಾಗ ಈ ಘಟನೆ ಸಂಭವಿಸಿದೆ. ಈ ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಲಾಗಿದೆ” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗುಣೇಂದ್ರ ದೇಕಾ ತಿಳಿಸಿದ್ದಾರೆ.

“ಪ್ರಕರಣ ದಾಖಲಾಗಿರುವ ವ್ಯಕ್ತಿಯ ಕುಟುಂಬ ಸದಸ್ಯರು ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆ. ನಾಲ್ಕು ಜನರನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದರು.

ಆದರೆ, ಈ ಬಗ್ಗೆ ತನ್ನ ಸಹೋದ್ಯೋಗಿಗಳೊಂದಿಗೆ ತನಿಖೆ ನಡೆಸಲು ಬಂದಿದ್ದ ಪೊಲೀಸ್ ಅಧಿಕಾರಿ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂದು ಸ್ಥಳೀಯರು ಹೇಳಿಕೊಂಡಿದ್ದು, ಘಟನೆಯ ತನಿಖೆ ನಡೆಯುತ್ತಿದೆ.////