ಕುಲ್ಗಾಮ್‌ನಲ್ಲಿ ಇಬ್ಬರು ಉಗ್ರರ ಬಂಧನ

Story Highlights

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳು ಮತ್ತೊಮ್ಮೆ ಮೇಲುಗೈ ಸಾಧಿಸಿವೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳು ಮತ್ತೊಮ್ಮೆ ಮೇಲುಗೈ ಸಾಧಿಸಿವೆ. ಕುಲ್ಗಾಮ್‌ನಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಬುಧವಾರ ನಸುಕಿನಲ್ಲಿ ಕುಲ್ಗಾಮ್‌ನ ಹಡಿಗಾಂ ಪ್ರದೇಶದಲ್ಲಿ ಮೂವರು ಭಯೋತ್ಪಾದಕರ ಉಪಸ್ಥಿತಿಯ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಆರಂಭಿಸಿದವು. ಈ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಆದರೆ ಉಗ್ರರ ಪೋಷಕರನ್ನು ಪೊಲೀಸರು ಸ್ಥಳಕ್ಕೆ ಕರೆತಂದಿದ್ದಾರೆ. ಪೊಲೀಸರು ಮತ್ತು ಅವರ ಪೋಷಕರು ಶರಣಾಗುವಂತೆ ಕೇಳಿದಾಗ, ಇಬ್ಬರು ಭಯೋತ್ಪಾದಕರು ತಮ್ಮ ಬಂದೂಕುಗಳನ್ನು ತೊರೆದರು. ಅವರನ್ನು ಬಂಧಿಸಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇವರಿಬ್ಬರೂ ಸ್ಥಳೀಯ ಭಯೋತ್ಪಾದಕರು ಎಂದು ತಿಳಿದು ಬಂದಿದ್ದು, ಆ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿಯಲಿದ್ದು, ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Two terrorists arrested in Kulgam

Related Stories