ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ನೀಡಿ, ಉಕ್ರೇನ್ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ
ಉಕ್ರೇನ್ ವಿರುದ್ಧದ ರಷ್ಯಾ ಯುದ್ಧದಿಂದ ಹಿಂದಿರುಗಿದ ಭಾರತೀಯ ವಿದ್ಯಾರ್ಥಿಗಳು ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಜಂತರ್ ಮಂತರ್ನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.
ನವದೆಹಲಿ: ಉಕ್ರೇನ್ ವಿರುದ್ಧದ ರಷ್ಯಾ ಯುದ್ಧದಿಂದ ಹಿಂದಿರುಗಿದ ಭಾರತೀಯ ವಿದ್ಯಾರ್ಥಿಗಳು ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಜಂತರ್ ಮಂತರ್ನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ತಮ್ಮ ವೈದ್ಯಕೀಯ ಶಿಕ್ಷಣವನ್ನು ಪೂರ್ಣಗೊಳಿಸಲು ಮತ್ತು ಸ್ಥಳೀಯ ವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಪ್ರವೇಶಕ್ಕೆ ವ್ಯವಸ್ಥೆ ಮಾಡಲು ಸಹಾಯ ಮಾಡಲು ಕೇಂದ್ರ ಸರ್ಕಾರವನ್ನು ಅವರು ಕೇಳಿದರು.
ಫೆಬ್ರವರಿ 24 ರಂದು ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ, ಕೇಂದ್ರ ಸರ್ಕಾರವು ವಿಶೇಷ ವಿಮಾನಗಳಲ್ಲಿ ಅಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ 20,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಸ್ಥಳಾಂತರಿಸಿತು. ಆದರೆ, ವೈದ್ಯಕೀಯ ಶಿಕ್ಷಣ ಮುಂದುವರಿಕೆಯ ಬಗ್ಗೆ ಅವರೆಲ್ಲರೂ ಆತಂಕದಲ್ಲಿದ್ದಾರೆ.
ಆದಾಗ್ಯೂ, ಉಕ್ರೇನ್ನಲ್ಲಿನ ಅನಿರೀಕ್ಷಿತ ಬೆಳವಣಿಗೆಗಳಿಂದ ಭಾರತಕ್ಕೆ ಹಿಂತಿರುಗಿದ ತಮ್ಮ ಮಕ್ಕಳ ಶಿಕ್ಷಣದ ಭವಿಷ್ಯವು ದುಸ್ತರವಾಗಿದೆ ಎಂದು ಕೆಲವು ಪೋಷಕರು ಭಾವಿಸಿದ್ದಾರೆ. ತಮ್ಮ ಮಕ್ಕಳನ್ನು ಅಲ್ಲಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆತಂದ ರೀತಿಯಲ್ಲೇ ಅವರ ವೃತ್ತಿಗೂ ಕೇಂದ್ರ ಸರ್ಕಾರ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಮತ್ತೊಂದೆಡೆ, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಮಾರ್ಚ್ 4 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಯುದ್ಧದಂತಹ ಪರಿಸ್ಥಿತಿಗಳಿಂದಾಗಿ ಇಂಟರ್ನ್ಶಿಪ್ ಬಾಕಿ ಉಳಿದಿರುವ ವಿದೇಶಿ ವೈದ್ಯಕೀಯ ಪದವೀಧರರು ತಮ್ಮ ಉಳಿದ ಇಂಟರ್ನ್ಶಿಪ್ ಅನ್ನು ದೇಶದಲ್ಲಿ ಪೂರ್ಣಗೊಳಿಸಲು ಅರ್ಹರಾಗಿದ್ದಾರೆ.
ಆದರೆ, ಕೋರ್ಸ್ನ ಪ್ರಾರಂಭದಲ್ಲಿರುವವರಿಗೆ ಸಂಬಂಧಿಸಿದಂತೆ ಯಾವುದೇ ಮಾರ್ಗಸೂಚಿಗಳನ್ನು ನೀಡಲಾಗಿಲ್ಲ. ಇದರಿಂದ ಅವರು ಆತಂಕಗೊಂಡಿದ್ದಾರೆ.
Ukraine Returned Students Protest In Delhi Seek Admission In Indian Colleges
Follow Us on : Google News | Facebook | Twitter | YouTube