Welcome To Kannada News Today : Read Kannada News From kannadanews.today

Suresh Angadi passed away : ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ - Suresh Angadi died in New Delhi

ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ಸಂಜೆ ನಿಧನ ಹೊಂದಿದ್ದಾರೆ. ಕೋವಿಡ್ ಸೋಂಕಿನ ಕಾರಣದಿಂದ ಸುರೇಶ್ ಅಂಗಡಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ 65 ವರ್ಷದ ಸಂಸದ ಸುರೇಶ್ ಅಂಗಡಿ ಅವರು ಇಂದು ಸಾಯಂಕಾಲ ಮೃತಪಟ್ಟಿದ್ದಾರೆ.

ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ

ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ಸುರೇಶ್ ಅಂಗಡಿ ಅವರು ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಕೋವಿಡ್ ಸೋಂಕಿನ ಕಾರಣದಿಂದ ಸುರೇಶ್ ಅಂಗಡಿ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ 65 ವರ್ಷದ ಸಂಸದ ಅಂಗಡಿ ಅವರು ಇಂದು ಸಾಯಂಕಾಲ ಮೃತಪಟ್ಟಿದ್ದಾರೆ.

1955 ಜೂನ್ 1ರಂದು ಜನಿಸಿದ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿ ಸಂಸದರಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಬೆಳಗಾವಿಯಿಂದ ಆರಿಸಿ ಬಂದಿದ್ದರು. ಪ್ರಸ್ತುತ ಕೇಂದ್ರ ರೈಲ್ವೆ ಖಾತೆಯ ಸಹಾಯಕ ಸಚಿವರಾಗಿದ್ದರು.

Union Minister of State for Railways, Suresh Angadi passed away
Union Minister of State for Railways, Suresh Angadi passed away

ಬಿ.ಕಾಂ, ಎಲ್ಎಲ್‌ಬಿ ಓದಿದ್ದ ಸುರೇಶ ಅಂಗಡಿ ಅವರು 2004ರಿಂದ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಲಿಂಗಾಯತ– ಬಣಜಿಗ ಸಮುದಾಯಕ್ಕೆ ಸೇರಿದ್ದರು. ಯುವಕರಾಗಿದ್ದಾಗಲೇ ಬಿಜೆಪಿಗೆ ಸೇರ್ಪಡೆಯಾಗಿ, ಜಿಲ್ಲಾ ಘಟಕದ ಅಧ್ಯಕ್ಷ ಸೇರಿದಂತೆ ವಿವಿಧ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಜತೆಗೆ ಸಿಮೆಂಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.ಪತ್ನಿ ಮಂಗಳಾ, ಪುತ್ರಿಯರಾದ ಸ್ಫೂರ್ತಿ ಹಾಗೂ ಶ್ರದ್ಧಾ ಇದ್ದಾರೆ. ಮಗಳು ಶ್ರದ್ಧಾ ಅವರ ವಿವಾಹವನ್ನು ಶಾಸಕ, ಜಗದೀಶ ಶೆಟ್ಟರ್‌ ಅವರ ಪುತ್ರನೊಂದಿಗೆ ನೆರವೇರಿಸಿದ್ದರು.

ಸದಾ ಲವಲವಿಕೆಯಿಂದ ಇರುತ್ತಿದ್ದ ಸುರೇಶ್‌ ಅಂಗಡಿಯವರು ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದರು. ಇದೀಗ ಸುರೇಶ್‌ ಅಂಗಡಿಯವರ ಹಠಾತ್‌ ನಿಧನ ಜನತೆಯನ್ನು ದಿಗ್ಬ್ರಮೆಗೊಳಿಸಿದೆ.

ಸಂಸತ್ ಅಧಿವೇಶನಕ್ಕೂ ಮುನ್ನ ಎಲ್ಲಾ ಸಂಸದರಿಗೂ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರಲ್ಲಿ ಸುರೇಶ್ ಅಂಗಡಿ ಅವರಿಗೆ ಸೋಂಕು ಪಾಸಿಟಿವ್ ಕಾಣಿಸಿಕೊಂಡಿತ್ತು.

ಶ್ವಾಸಕೋಶದ ಸೋಂಕಿಗೆ ಗುರಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾಗಿದ್ದ ಅವರು ನರೇಂದ್ರ ಮೋದಿ ಸರಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನೇಮಕವಾಗಿದ್ದರು.

ರೈಲ್ವೆ ಸಚಿವರಾದ ನಂತರ ಅವರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದರು. ಲೋಕಸಭೆಯ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಅವರು ಕೊರೋನಾ ಟೆಸ್ಟ್ ಮಾಡಿಸಿದ್ದರು. ಆಗ ಪಾಸಿಟಿವ್ ಬಂದಿದೆ, ನಾನು ಆರೋಗ್ಯವಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ಸುರೇಶ್ ಅಂಗಡಿ ಅವರು ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯ ಕಚೇರಿಯ ಕಾಮಗಾರಿಗಳ ಪರಿಶೀಲನೆ ಸೇರಿದಂತೆ, ಧಾರವಾಡ – ಬೆಳಗಾವಿಯ ಹೊಸ ರೈಲು ಮಾರ್ಗ ಮಂಜೂರು ಮತ್ತು  ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢರ ಹೆಸರು ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು ಮಾಡಿ ಉತ್ತರ ಕರ್ನಾಟಕ ಭಾಗದ ಜನಾನುರಾಗಿಯಾಗಿದ್ದರು.

Web Title : Union Minister of State for Railways, Suresh Angadi passed away

( Union Minister of State for Railways, Suresh Angadi passed away on Wednesday ( 23-09-2020). He had tested positive for Covid-19 and was admitted to the AIIMS Trauma Centre on September 11th. But Suresh C Angadi died in New Delhi on Wednesday due to Covid-19. Suresh Angadi Born in the Koppa village of Belagavi, Suresh Angadi obtained a law degree from the Raja Lakhamgouda Law College in the district. He is survived by his wife and two daughters.)

📢 Kannada News ಸಮಯೋಚಿತ ನವೀಕರಣಗಳಿಗಾಗಿ Facebook | Twitter ಪೇಜ್‌ ಲೈಕ್‌ ಮಾಡಿ, ದಿನದ ಪ್ರಮುಖ ಸುದ್ದಿಗಳಿಗಾಗಿ Kannada News Today ಅಧಿಕೃತ ಕನ್ನಡ ನ್ಯೂಸ್ ವೆಬ್‌ಸೈಟ್ ಭೇಟಿ ನೀಡಿ, ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಪಡೆಯಿರಿ.