ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್‌ ನಿಧನ

Ram Vilas Paswan passed away : ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ, ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಗುರುವಾರ ನಿಧನ. ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್‌ ನಿಧನ ಬಗ್ಗೆ ಪುತ್ರ ಚಿರಾಗ್‌ ಪಾಸ್ವಾನ್‌ ಟ್ವೀಟ್‌ ಮಾಡಿದ್ದಾರೆ.

( Kannada News ) : ನವದೆಹಲಿ : Ram Vilas Paswan death news – ಕೇಂದ್ರ ಸಚಿವ ಮತ್ತು ಲೋಕ ಜನ ಶಕ್ತಿ ಪಕ್ಷದ ಮುಖ್ಯಸ್ಥ ನಿಧನರಾದರು. ಈ ಬಗ್ಗೆ ಅವರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ.

ಅವರು ಕೆಲವು ದಿನಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ 74 ವರ್ಷ. ರಾಮ್‌ವಿಲಾಸ್ ಪಾಸ್ವಾನ್ ಅವರು ಲೋಕಸಭೆಗೆ 8 ಬಾರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ರಾಜ್ಯಸಭೆಯ ಸದಸ್ಯರಾಗಿ ಬಿಹಾರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಸಾವಿಗೆ ಕಾರಣ ಹೃದಯಾಘಾತ ಎಂದು ತಿಳಿದುಬಂದಿದೆ.

Union Minister Ram Vilas Paswan passe
Union Minister Ram Vilas Paswan passe

ರಾಮ್ ವಿಲಾಸ್ ಪಾಸ್ವಾನ್ ಅವರು ಪ್ರಧಾನಿ ಮೋದಿಯವರ ಸಂಪುಟದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾಗಿ ಮುಂದುವರೆದಿದ್ದಾರೆ. ಪಾಸ್ವಾನ್ ದೇಶದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರು. ಪಶ್ವಾನ್ ಇನ್ನಿಲ್ಲ ಎಂಬ ಸುದ್ದಿಗೆ ಎಲ್ಜೆಪಿ ಕಾರ್ಯಕರ್ತರು ಶೋಕ ವ್ಯಕ್ತಪಡಿಸುತ್ತಿದ್ದಾರೆ.

ತಂದೆ ಅಪ್ಪಿಕೊಂಡಿರುವ ತಮ್ಮ ಹಳೆಯ ಬಾಲ್ಯದ ಫೋಟೊವನ್ನು ಪೋಸ್ಟ್ ಮಾಡಿರುವ ಚಿರಾಗ್‌ ‘ಅಪ್ಪಾ, ಈಗ ನೀವು ಈ ಜಗತ್ತಿನಲ್ಲಿ ಇಲ್ಲ, ಆದರೆ ನನಗೆ ತಿಳಿದಿದೆ ನೀವು ಎಲ್ಲೇ ಇದ್ದರೂ ಸದಾ ನನ್ನೊಂದಿಗೆ ಇರುತ್ತೀರ, ಮಿಸ್‌ ಯು ಪಾಪಾ…’ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನಾನು ಪದಗಳನ್ನು ಮೀರಿ ದುಃಖಿತನಾಗಿದ್ದೇನೆ. ಶ್ರೀ ರಾಮ್ ವಿಲಾಸ್ ಪಾಸ್ವಾನ್ ಜಿ ಅವರ ನಿಧನವು ವೈಯಕ್ತಿಕ ನಷ್ಟವಾಗಿದೆ. ನಾನು ಒಬ್ಬ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ, ಎಂದಿದ್ದಾರೆ.

PM Narendra Modi on Twitter About Ram Vilas Paswan Death

I am saddened beyond words. There is a void in our nation that will perhaps never be filled. Shri Ram Vilas Paswan Ji’s demise is a personal loss. I have lost a friend, valued colleague and someone who was extremely passionate to ensure every poor person leads a life of dignity.

Web Title : Union Minister Ram Vilas Paswan passes away at 74
Scroll Down To More News Today