ಯುಪಿಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಟಿಎಂಸಿ ಸೇರಿದ ತ್ರಿಪಾಠಿ ಬ್ರದರ್ಸ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಪಕ್ಷದ ಇಬ್ಬರು ಪ್ರಮುಖ ನಾಯಕರು ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಮುಖಂಡರಾದ ರಾಜೇಶ್ ಪತಿ ತ್ರಿಪಾಠಿ ಮತ್ತು ಲಲಿತೇಶ್ ಪತಿ ತ್ರಿಪಾಠಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಸಿಲಿಗುರಿಯಲ್ಲಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಟಿಎಂಸಿ ಸೇರಿದರು. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ತೃಣಮೂಲ ಕಾಂಗ್ರೆಸ್ ಘೋಷಿಸಿದೆ.

ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯಲಾರಂಭಿಸಿದ್ದಾರೆ.

ಆ ನಿಟ್ಟಿನಲ್ಲಿ ತ್ರಿಪಾಠಿ ಬ್ರದರ್ಸ್ ತೃಣಮೂಲ ಸೇರಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಮೀಸಲಾತಿ, ಚುನಾವಣೆಯಲ್ಲಿ ಗೆದ್ದರೆ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಸ್ಕೂಟರ್ ನೀಡುವುದಾಗಿ ಭರವಸೆ ನೀಡುತ್ತಿದೆ. ಆದರೆ, ಪ್ರಮುಖ ನಾಯಕರ ನಿರ್ಗಮನ ಪಕ್ಷಕ್ಕೆ ಆತಂಕ ತಂದಿದೆ.

Stay updated with us for all News in Kannada at Facebook | Twitter
Scroll Down To More News Today