ದೇಶದ ಅಭಿವೃದ್ಧಿಯಲ್ಲಿ ಯುಪಿ ಪ್ರಮುಖ ಪಾತ್ರ ವಹಿಸುತ್ತದೆ : ಯೋಗಿ ಆದಿತ್ಯನಾಥ್

ದೇಶದ ಅಭಿವೃದ್ಧಿಯಲ್ಲಿ ಉತ್ತರ ಪ್ರದೇಶ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಲಕ್ನೋ : ದೇಶದ ಅಭಿವೃದ್ಧಿಯಲ್ಲಿ ಉತ್ತರ ಪ್ರದೇಶ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ (2022) ಚುನಾವಣೆ ನಿಗದಿಯಾಗಿದೆ. ಭಾರತದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ವಿವಿಧ ವಲಯಗಳಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಬಿಜೆಪಿ, ಸಮಾಜವಾದಿ ಪಕ್ಷ, ಬಹುಜನ ಸಮಾಜ ಸೇರಿದಂತೆ ವಿವಿಧ ಪಕ್ಷಗಳು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿವೆ. ಚುನಾವಣೆಗೆ ತಿಂಗಳಷ್ಟೇ ಬಾಕಿ ಉಳಿದಿದ್ದು, ವಿವಿಧ ಪಕ್ಷಗಳು ಅಖಾಡಕ್ಕಿಳಿದಿವೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ನಾನಾ ಕಲ್ಯಾಣ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಉತ್ತರ ಪ್ರದೇಶದ ಶಹರಾನ್‌ಪುರ ಜಿಲ್ಲೆಯಲ್ಲಿ ನೂತನ ವಿಶ್ವವಿದ್ಯಾನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಇಂದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉತ್ತರ ಪ್ರದೇಶವು ಪ್ರಸ್ತುತ ಅಭಿವೃದ್ಧಿಯ ಪಥದಲ್ಲಿದೆ ಎಂಬುದಕ್ಕೆ ಈ ವಿಶ್ವವಿದ್ಯಾಲಯ ಉದಾಹರಣೆಯಾಗಿದೆ ಎಂದರು.

Stay updated with us for all News in Kannada at Facebook | Twitter
Scroll Down To More News Today