ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
Modi Birthday : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಇದನ್ನು ಎಕ್ಸ್ ವೇದಿಕೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ (Modi Birthday) ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಎಕ್ಸ್ ವೇದಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಟ್ರಂಪ್ ತಮ್ಮ 75 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ತಮಗೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ ಎಂದು ಮೋದಿ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
“ನನ್ನ ಸ್ನೇಹಿತ ಪ್ರಧಾನಿ ಮೋದಿ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು” ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಟ್ರಂಪ್ ಅವರ ಟ್ವೀಟ್‌ಗೆ ಮೋದಿ ಧನ್ಯವಾದ ಅರ್ಪಿಸಿದರು. ಡೊನಾಲ್ಡ್ ಟ್ರಂಪ್ ನನಗೆ ಕರೆ ಮಾಡಿ ನನ್ನ ಹುಟ್ಟುಹಬ್ಬದ ಶುಭಾಶಯ ಕೋರಿದರು. ಅದಕ್ಕಾಗಿ ಟ್ರಂಪ್‌ಗೆ ಧನ್ಯವಾದಗಳು.
ನಿಮ್ಮಂತೆಯೇ, ಭಾರತ-ಯುಎಸ್ ಸಮಗ್ರ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರದತ್ತ ನಿಮ್ಮ ಹೆಜ್ಜೆಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
US President Donald Trump Wishes Pm Modi On Birthday







