Uttar Pradesh Assembly elections : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ: 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಪ್ರಿಯಾಂಕಾ ಗಾಂಧಿ..!

Uttar Pradesh Assembly elections : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 125 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಿಯಾಂಕಾ ಬಿಡುಗಡೆ ಮಾಡಿದ್ದಾರೆ.

Uttar Pradesh Assembly elections – ನವದೆಹಲಿ : ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 125 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಿಯಾಂಕಾ ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಎಂಬ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಫೆಬ್ರವರಿ 10 ರಂದು ಮೊದಲ ಸುತ್ತಿನ ಚುನಾವಣೆ ನಿಗದಿಯಾಗಿದೆ. ಹೀಗಾಗಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಹಾಗೂ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವಲ್ಲಿ ನಿರತವಾಗಿವೆ.

ಈ ಹಿನ್ನೆಲೆಯಲ್ಲಿ ನಿನ್ನೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿರುವ 125 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಿಯಾಂಕಾ ಈಗಾಗಲೇ ಹೇಳಿದ್ದರು. ಅದರಂತೆ, ಪಟ್ಟಿಯಲ್ಲಿ ಶೇ.40 ರಷ್ಟು ಸೀಟುಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅಂದರೆ, 50 ಮಹಿಳಾ ಅಭ್ಯರ್ಥಿಗಳು.

ಅದೇ ರೀತಿ ಇನ್ನೂ 50 ಅಭ್ಯರ್ಥಿಗಳು ಯುವಕರು. ಉನ್ನಾ ಜಿಲ್ಲೆಯ ಬಿಜೆಪಿ ನಾಯಕನಿಂದ ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ಆಶಾ ಸಿಂಗ್ ಅವರನ್ನು ಉನ್ನಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ.

ಪಟ್ಟಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ..

ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇ.40 ಹಾಗೂ ಯುವಕರಿಗೆ ಶೇ.40ರಷ್ಟು ಸೀಟುಗಳನ್ನು ಮೀಸಲಿಡುವ ಮೂಲಕ ಹೊಸ ಐತಿಹಾಸಿಕ ಆರಂಭವನ್ನು ಮಾಡಿದೆ. ಉತ್ತರ ಪ್ರದೇಶದಲ್ಲಿ ಈ ಹಿಂದೆ ತಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಡಿದವರಿಗೆ ಅವಕಾಶ ನೀಡಿದ್ದೇವೆ. ಅಧಿಕಾರದ ಕೇಂದ್ರದಲ್ಲಿ ನಿಲ್ಲಲು ಬೇಕಾದ ಬಲವನ್ನು ಕಾಂಗ್ರೆಸ್ ನೀಡಲಿದೆ. ಈ ಚುನಾವಣೆಯಲ್ಲಿ ನಾವು ನಕಾರಾತ್ಮಕ ಪ್ರಚಾರದಲ್ಲಿ ತೊಡಗುವುದಿಲ್ಲ. ನಾವು ಜನರಿಗೆ ಸಂಬಂಧಿಸಿದ ವಿಷಯಗಳಲ್ಲಿ ತೊಡಗಿಸಿಕೊಳ್ಳುತ್ತೇವೆ ಮತ್ತು ರಾಜ್ಯದ ಉಜ್ವಲ ಭವಿಷ್ಯಕ್ಕಾಗಿ ಸಕಾರಾತ್ಮಕ ಪ್ರಚಾರದಲ್ಲಿ ತೊಡಗುತ್ತೇವೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

‘ಯು.ಪಿ. ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ?” ಎಂದು ಸುದ್ದಿಗಾರರಿಗೆ ಪ್ರಿಯಾಂಕಾ ಪ್ರತಿಕ್ರಿಯಿಸಲಿಲ್ಲ.

Stay updated with us for all News in Kannada at Facebook | Twitter
Scroll Down To More News Today