ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ನಿಧನ, ಉಪರಾಷ್ಟ್ರಪತಿ ಸಂತಾಪ

ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ಅವರ ನಿಧನಕ್ಕೆ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ಅವರ ನಿಧನಕ್ಕೆ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸಂತಾಪ ಸೂಚಿಸಿದ್ದಾರೆ. ಅವರು ನೃತ್ಯ ಸಂಪ್ರದಾಯಗಳಿಗೆ ಉತ್ತಮ ಕಂಪನ್ನು ಸೇರಿಸಿದ್ದಾರೆ ಎಂದು ಹೇಳಿದರು. ಹತ್ತು ಭಾಷೆಗಳಲ್ಲಿ ನೂರಾರು ಸಿನಿಮಾ ಗೀತೆಗಳಿಗೆ ನೃತ್ಯ ಸಂಯೋಜನೆ ಮಾಡಿದ್ದು ನೆನಪಿಸಿಕೊಂಡರು. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು.

‘ಪ್ರಸಿದ್ಧ ನೃತ್ಯ ನಿರ್ದೇಶಕ ಶಿವಶಂಕರ್‌ ಮಾಸ್ಟರ್ ನಿಧನರಾಗಿದ್ದಾರೆ ಎಂದು ತಿಳಿದು ದುಃಖವಾಯಿತು. ಅವರ ನೃತ್ಯ ಸಂಯೋಜನೆಯು ಶ್ಲಾಘನೀಯವಾಗಿದೆ, ಭಾರತೀಯ ನೃತ್ಯ ಸಂಪ್ರದಾಯಗಳಿಗೆ ಮತ್ತು ಸುಮಾರು 10 ಭಾರತೀಯ ಭಾಷೆಗಳಲ್ಲಿ ನೂರಾರು ಹಾಡುಗಳನ್ನು ನಿರ್ದೇಶಿಸಿದ್ದಾರೆ.. ಅವರ ಉತ್ತಮ ಅಭಿನಯ ಅಭಿನಂದನೀಯ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today