ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ವೈರಲ್
ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕಾಂಚೀಪುರಂ : ಕಾಂಚೀಪುರಂ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ನಂತರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶಿಕ್ಷಣಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯೇ ಬಾತ್ ರೂಂ ಕ್ಲೀನ್ ಮಾಡಿದ್ದಾನೋ ಅಥವಾ ಬೇರೆಯವರ ಬಲವಂತವೋ? ಸೇರಿದಂತೆ ಬೇರೆ ಬೇರೆ ಕೋನಗಳಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇಂತಹ ಘಟನೆಗಳು ಹೆಚ್ಚುತ್ತಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಶಿಕ್ಷಕರ ಮೇಲೆ ಕ್ರಮಕೈಗೊಳ್ಳಬೇಕು ಎಂಬ ಆಗ್ರಹ ಹೆಚ್ಚಿದೆ. ವಿದ್ಯಾರ್ಥಿಗಳು ಶೌಚಾಲಯಗಳನ್ನು ಅಸುರಕ್ಷಿತವಾಗಿ ಸ್ವಚ್ಛಗೊಳಿಸುವುದರಿಂದ ಸೋಂಕು ಹರಡುವ ಭೀತಿ ಹೆಚ್ಚಿದೆ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.
video of a government school student cleaning the toilet Goes viral
Follow Us on : Google News | Facebook | Twitter | YouTube