ಎನ್ ಡಿಎ ಅನ್ನು ಸೋಲಿಸುವುದು ನಿಜವಾದ ವಿಜಯದಶಮಿ: ತೇಜಸ್ವಿ ಯಾದವ್

ಮುಂಬರುವ ಉಪಚುನಾವಣೆಯಲ್ಲಿ ಎನ್ಡಿಎಯನ್ನು ಸೋಲಿಸಿದ ನಂತರವೇ ಬಿಹಾರದ ಜನರು ನಿಜವಾದ ವಿಜಯದಶಮಿಯನ್ನು ಆಚರಿಸುತ್ತಾರೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. 

ಪಾಟ್ನಾ: ಮುಂಬರುವ ಉಪಚುನಾವಣೆಯಲ್ಲಿ ಎನ್ಡಿಎಯನ್ನು ಸೋಲಿಸಿದ ನಂತರವೇ ಬಿಹಾರದ ಜನರು ನಿಜವಾದ ವಿಜಯದಶಮಿಯನ್ನು ಆಚರಿಸುತ್ತಾರೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ-ಜೆಡಿಯು ಸರ್ಕಾರವು ಬಡತನ, ನಿರುದ್ಯೋಗ, ಅಪರಾಧ ಮತ್ತು ಭ್ರಷ್ಟಾಚಾರಕ್ಕೆ ಮಾತ್ರ ಅವಕಾಶ ನೀಡಿದೆ ಎಂದು ಅವರು ಆರೋಪಿಸಿದರು. ಬಿಹಾರಕ್ಕೆ ಯಾವುದೇ ವಿಶೇಷ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ಸಿಕ್ಕಿಲ್ಲ ಎಂದು ಟೀಕಿಸಿದರು.

ಜನರು ಈ ಸರ್ಕಾರದಿಂದ ಬೇಸತ್ತಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದರು. ಎರಡು ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಆರ್ ಜೆಡಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಅವರು ಹೇಳಿದ್ದಾರೆ.