ಗಂಡನನ್ನು ಮರಕ್ಕೆ ಕಟ್ಟಿಹಾಕಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾ*ಚಾರ
ಪತಿಯನ್ನು ಮರಕ್ಕೆ ಕಟ್ಟಿಹಾಕಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ, ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ.
ಭೋಪಾಲ್ (Bhopal): ಮಧ್ಯಪ್ರದೇಶದಲ್ಲಿ (Madhya Pradesh) ದುಷ್ಕೃತ್ಯವೊಂದು ನಡೆದಿದೆ. ಇಂದೋರ್ ಮತ್ತು ರೇವಾ ಜಿಲ್ಲೆಗಳಲ್ಲಿ ಎರಡು ಭೀಕರ ಅತ್ಯಾಚಾರ ಘಟನೆಗಳು ಬೆಳಕಿಗೆ ಬಂದಿವೆ. ರೇವಾ ಜಿಲ್ಲೆಯ ದೇವಸ್ಥಾನದ ಬಳಿ ವಿಹಾರಕ್ಕೆ ತೆರಳಿದ್ದ ದಂಪತಿ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಪತಿಯನ್ನು ಮರಕ್ಕೆ ಕಟ್ಟಿಹಾಕಿ (tied to a tree) ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೆ, ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ.
ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಕ್ಟೋಬರ್ 21 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಸಹೋದರನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ
ಏತನ್ಮಧ್ಯೆ, ಇಂದೋರ್‌ನಲ್ಲಿ (Indore) ದಿನಗೂಲಿ ಕಾರ್ಮಿಕನೊಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಮಂಗಳವಾರ ಮುಂಜಾನೆ 3.45 ರ ಸುಮಾರಿಗೆ ನಗರದ ಸದರ್ ಬಜಾರ್ ಪ್ರದೇಶದಲ್ಲಿ ಮಹಿಳೆ ಅರೆಬೆತ್ತಲೆಯಾಗಿ ಮತ್ತು ರಕ್ತಸ್ರಾವವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸಿದೆ.
ಈ ಪ್ರಕರಣದ ತನಿಖೆಯ ವೇಳೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಸೋನು ಎಂಬ ಕಾರ್ಮಿಕ ಆಕೆಯ ಮೇಲೆ ಅತ್ಯಾಚಾರವೆಸಗಿರುವುದು ಪತ್ತೆಯಾಗಿದೆ. ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಏಕಕಾಲಕ್ಕೆ ಎರಡು ಅತ್ಯಾಚಾರ ಘಟನೆಗಳು ಬೆಳಕಿಗೆ ಬಂದ ನಂತರ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಿವೆ ಎಂದು ಟೀಕಿಸಿದ್ದಾರೆ.
Violence against two women in 48 hours in Madhya Pradesh