ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ, ಮೊಬೈಲ್ ಇಂಟರ್ನೆಟ್ ಬಂದ್

Violence During Anti-CAA Protest in Delhi Gate, protesters threw stones

KNT [ Kannada News Today ] : India News

ನವದೆಹಲಿ :  ದೆಹಲಿ ಗೇಟ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ವೇಳೆ ಕೆಲವು ಪ್ರತಿಭಟನಾಕಾರರು ಪೋಲೀಸರ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಇದ್ದಕ್ಕಿದ್ದಂತೆ ಘರ್ಷಣೆಗಳು ಪ್ರಾರಂಭವಾಗಿವೆ, ಜನಸಮೂಹವನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ್ದಾರೆ.ಘಟನೆಯ ನಂತರ, ನಗರದಲ್ಲಿ ಮೊಬೈಲ್ ಸಂಪರ್ಕವನ್ನು ಆರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ, ಮೊಬೈಲ್ ಇಂಟರ್ನೆಟ್ ಬಂದ್ - National News In Kannada
ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ, ಮೊಬೈಲ್ ಇಂಟರ್ನೆಟ್ ಬಂದ್

ಸುಮಾರು ಒಂದು ತಿಂಗಳಿನಿಂದ ಸಿಎಎ ವಿರುದ್ಧ ಧರಣಿ ನಡೆಸುತ್ತಿರುವ ಮಹಿಳೆಯರಿಗೆ ಡೇರೆಗಳನ್ನು ನಿರ್ಮಿಸಲು ಪೊಲೀಸರು ಅನುಮತಿ ನಿರಾಕರಿಸಿದ ನಂತರ ಈ ಹಿಂಸಾಚಾರ ಭುಗಿಲೆದ್ದಿದೆ, ಶುಕ್ರವಾರ ನಗರದಲ್ಲಿ ಮಳೆಯಾದಾಗ ತಮ್ಮನ್ನು ಮಳೆಯಿಂದ ರಕ್ಷಿಸಿಕೊಳ್ಳಲು ಡೇರೆ ಅಥವಾ ಟೆಂಟ್ ನಿರ್ಮಿಸಲು ಕೇಳಿದ್ದರು. ಇದೆ ವಿಚಾರವಾಗಿ ಪೊಲೀಸರ ಮೇಲೆ ಕಲ್ಲು ಎಸೆಯಲ್ಪಟ್ಟಿದೆ ಎಂದು ಆರೋಪಿಸಲಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಉಪಯೋಗಿಸಬೇಕಾಯಿತು..

ಪ್ರತಿಭಟನಾಕಾರರು ಪೊಲೀಸ್ ವಾಹನಗಳಿಗೆ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ, ಆದ್ದರಿಂದ ಅವರು ಪ್ರತಿಭಟನಾಕಾರರನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು”, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಅನ್ನು ನಿಯೋಜಿಸಲಾಯಿತು.////

Web Title : Violence During Anti-CAA Protest in Delhi Gate, protesters threw stones
ಕನ್ನಡ ನ್ಯೂಸ್ ನವೀಕರಣಗಳಿಗಾಗಿ ನಮ್ಮ Facebook | TwitterYouTube News Channel ಅನುಸರಿಸಿ. Latest News ಜೊತೆಗೆ Breaking News ನೀವಿರುವಲ್ಲಿಯೇ ಪಡೆಯಿರಿ.
(ಕನ್ನಡ ಸುದ್ದಿಗಳು Kannada News Today, KNT News Network)