ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, ಮಗು ಸೇರಿ ಐದು ಮಂದಿ ದುರ್ಮರಣ
ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐದು ಮಂದಿ ದುರ್ಮರಣ
- ಘಟನೆಯ ಕುರಿತು ಪೊಲೀಸರಿಂದ ತನಿಖೆ ಆರಂಭ
- ಬಿಜೆಪಿ ಶಾಸಕಿ ಅಂಬಿಕಾ ರಾಯ್ ಸರ್ಕಾರದ ವಿರುದ್ಧ ಆಕ್ರೋಶ
ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಈ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ.
ಪಶ್ಚಿಮ ಬಂಗಾಳದ ಕಲ್ಯಾಣಿ ಜಿಲ್ಲೆಯ ರತ್ತಲದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಘಟನೆ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಥಳೀಯ ಬಿಜೆಪಿ ಶಾಸಕಿ ಅಂಬಿಕಾ ರಾಯ್ ಈ ಘಟನೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಘಟನೆಗಳು ಆಗಾಗ್ಗೆ ಸಂಭವಿಸುತ್ತಿರುವುದು ವಿಷಾದಕರ ಎಂದು ಅವರು ಹೇಳಿದರು. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಸ್ಫೋಟಕಗಳು ಇದ್ದವು ಎಂದು ಅವರು ಹೇಳಿದರು.
4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಐವರು ಬಂಧನ
ಇಷ್ಟೊಂದು ದೊಡ್ಡ ಪ್ರಮಾಣದ ಸ್ಫೋಟಕಗಳನ್ನು ಹೊಂದಿರುವ ಪಟಾಕಿ ಕಾರ್ಖಾನೆಯ ಬಗ್ಗೆ ಪೊಲೀಸರಿಗೆ ತಿಳಿದಿಲ್ಲದಿರಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.
ಅಕ್ರಮ ಪಟಾಕಿ ಕಾರ್ಖಾನೆಗಳನ್ನು ತಡೆಯುವಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಅಂಬಿಕಾ ರಾಯ್ ಟೀಕಿಸಿದರು. ಇತ್ತೀಚಿನ ಸ್ಫೋಟ ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು.
West Bengal Firecracker Factory Explosion Kills Five
Our Whatsapp Channel is Live Now 👇