ರೈಲ್ವೆ ನಿಲ್ದಾಣದ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ತನ್ನ ಹಳ್ಳಿಗೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಒಬ್ಬ ಶಂಕಿತನನ್ನು ಬಂಧಿಸಿದ್ದಾರೆ.

ಪಾಟ್ನಾ: ರೈಲ್ವೆ ನಿಲ್ದಾಣದಲ್ಲಿ ಭೀಕರ ಘಟನೆ ನಡೆದಿದೆ. ತನ್ನ ಹಳ್ಳಿಗೆ ಹೋಗಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶ್ಯಾಮಪುರ ಗ್ರಾಮದಲ್ಲಿ ವಾಸಿಸುತ್ತಿದ್ದ ಯುವತಿಯೊಬ್ಬಳು ಪಾರ್ಶ್ವವಾಯು ಪೀಡಿತ ತನ್ನ ತಂದೆಗೆ ವೈದ್ಯಕೀಯ ಚಿಕಿತ್ಸೆಗಾಗಿ ಉತ್ತರ ಪ್ರದೇಶಕ್ಕೆ ಬಂದಿದ್ದಳು. ಈ ವೇಳೆ ಊರಿಗೆ ವಾಪಾಸ್ಸಾಗಲು ರೈಲು ನಿಲ್ದಾಣಕ್ಕೆ ಬಂದಿದ್ದರು.
ಇದೇ ವೇಳೆ, ರೈಲಿಗಾಗಿ ಕಾಯುತ್ತಿದ್ದ ಯುವತಿ ನೀರು ಕುಡಿಯಲು ಹೋದಾಗ, ಅಲ್ಲಿದ್ದ ಮೂವರು ವ್ಯಕ್ತಿಗಳು ಆಕೆಯ ಬಾಯಿ ಕಟ್ಟಿ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಹೀನ ಕೃತ್ಯ ಬಳಿಕ ಯುವತಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯ ನಂತರ, ಆಕೆ ತನ್ನ ತಂದೆಯ ಬಳಿಗೆ ಮರಳಿ ನಡೆದ ಭೀಕರತೆಯ ಬಗ್ಗೆ ಹೇಳಿದ್ದಾಳೆ.
ಮತ್ತೊಂದೆಡೆ, ಈ ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆಕೆಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟ ನಂತರ ಪ್ರಕರಣ ದಾಖಲಿಸಿಕೊಳ್ಳಲಾಯಿತು.
ಮಹಿಳೆ ನೀಡಿದ ಸುಳಿವುಗಳ ಆಧಾರದ ಮೇಲೆ, ಆರೋಪಿಗಳಲ್ಲಿ ಒಬ್ಬನನ್ನು ಅಭಿಷೇಕ್ ಬಿಂದ್ ಎಂದು ಗುರುತಿಸಿ ಬಂಧಿಸಲಾಯಿತು. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Woman Gang-Raped Near Railway Station



