Watch: ವೃದ್ಧ ದಂಪತಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಮಹಿಳೆ! ಭಯಾನಕ ಸಿಸಿಟಿವಿ ದೃಶ್ಯ

ದೆಹಲಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿ ಹೊಡೆದಿದ್ದು, ಗಾಯಗೊಂಡವರನ್ನು ಪರಿಶೀಲಿಸಿದ ಬಳಿಕ ಮಹಿಳೆ ಸ್ಥಳದಿಂದ ಪರಾರಿಯಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video: ದೆಹಲಿಯ ಪಶ್ಚಿಮ ಭಾಗದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ದಂಪತಿಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶುಕ್ರವಾರ ಬೆಳಗ್ಗೆ ಸುಮಾರು 8.45ರ ವೇಳೆಗೆ ಕೀರ್ತಿ ನಗರದಲ್ಲಿರುವ ಆರ್ಯ ಸಮಾಜ ಮಂದಿರದ ಸಮೀಪ ಈ ಘಟನೆ ನಡೆದಿದೆ. ಹ್ಯುಂಡೈ ಕ್ರೆಟಾ (Hyundai Creta) ಕಾರು ವೇಗವಾಗಿ ಬಂದಿದ್ದು, ರಸ್ತೆ ಬದಿಯಲ್ಲಿ ಸಾಗುತ್ತಿದ್ದ 70 ವರ್ಷ ಮೇಲ್ಪಟ್ಟ ದಂಪತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಕೆಲ ಅಡಿ ದೂರಕ್ಕೆ ಎಸೆಯಲ್ಪಟ್ಟು ರಸ್ತೆಯ ಮೇಲೆ ಬಿದ್ದಿದ್ದಾರೆ.

ಅಪಘಾತದ ಬಳಿಕ ಕಾರು ನಿಲ್ಲಿಸಿದ ಮಹಿಳೆ ತಕ್ಷಣ ಕೆಳಗೆ ಇಳಿಯಲಿಲ್ಲ. ಕೆಲ ಕ್ಷಣ ಕಾರಿನ ಬಾಗಿಲು ತೆರೆದು ಮತ್ತೆ ಮುಚ್ಚಿದ ಬಳಿಕ ಹೊರಗೆ ಬಂದಿದ್ದಾರೆ. ಗಾಯಗೊಂಡಿದ್ದ ದಂಪತಿಯನ್ನು ಪರಿಶೀಲಿಸಿದ ಅವರು, ಇಬ್ಬರೂ ಜೀವಂತವಾಗಿರುವುದನ್ನು ಕಂಡು ಕೈ ಮುಗಿದು ದೇವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ವೇಳೆ ಸ್ಥಳೀಯರು ಗಾಯಗೊಂಡ ದಂಪತಿಗೆ ನೆರವಾಗಲು ಮುಂದಾಗಿ ಅವರನ್ನು ಮೇಲೆತ್ತಿ ಪ್ರಾಥಮಿಕ ಆರೈಕೆ ಮಾಡಿದ್ದಾರೆ. ಆದರೆ ಸ್ಥಳೀಯರು ಸಹಾಯದಲ್ಲಿ ತೊಡಗಿದ್ದ ಸಂದರ್ಭದಲ್ಲೇ ಮಹಿಳೆ ಮತ್ತೆ ಕಾರಿನಲ್ಲಿ ಕುಳಿತು ಅಲ್ಲಿಂದ ಪರಾರಿಯಾಗಿದ್ದಾಳೆ.

ಇದನ್ನೂ ಓದಿ: Google Search ನಲ್ಲಿ ಇವುಗಳನ್ನು ಹುಡುಕುವುದು, ಡೌನ್‌ಲೋಡ್ ಮಾಡುವುದು ಕಾನೂನುಬಾಹಿರ! ಹುಷಾರ್

ಅಪಘಾತದಲ್ಲಿ ವೃದ್ಧನ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ಅವರ ಪತ್ನಿಗೂ ಗಾಯವಾಗಿದೆ. ಸ್ಥಳೀಯರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಗಾಯಗೊಂಡವರನ್ನು 79 ವರ್ಷದ ದಯಾನಂದ್ ಮತ್ತು ಆತನ ಪತ್ನಿ ಎಂದು ಗುರುತಿಸಲಾಗಿದೆ. ಅವರ ಇಬ್ಬರು ಮಕ್ಕಳು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿಯೂ ತನಿಖೆಯಲ್ಲಿ ತಿಳಿದುಬಂದಿದೆ.

ವೃದ್ಧ ದಂಪತಿಗೆ ಡಿಕ್ಕಿ ಹೊಡೆದ ಕಾರನ್ನು ಚಲಾಯಿಸುತ್ತಿದ್ದ ಮಹಿಳೆಯನ್ನು 49 ವರ್ಷದ ನವಲೀನ್ ಕೌರ್ ಎಂದು ಗುರುತಿಸಲಾಗಿದೆ. ಪೊಲೀಸರು ಆಕೆಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ವಾಹನ ಚಲಾಯಿಸಿ ಗಾಯಗಳಿಗೆ ಕಾರಣವಾದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಪತಿ ಪೈಲಟ್ ಸ್ಮಿತ್ ಮಚ್ಚಾರ್ ಮೇಲೆ ಹಲ್ಲೆ! ಪತ್ನಿ ಕೊಟ್ಟ ಪ್ರತಿಕ್ರಿಯೆ ವೈರಲ್

ಅಪಘಾತದ ನಂತರ ಮಹಿಳೆ ಗಾಯಗೊಂಡ ದಂಪತಿಯನ್ನು ಪರಿಶೀಲಿಸಿ ಅಲ್ಲಿಂದ ತೆರಳಿರುವ ದೃಶ್ಯವೂ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಘಟನೆ ಕುರಿತು ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories