Zika Virus, ಉತ್ತರ ಪ್ರದೇಶದಲ್ಲಿ 79ಕ್ಕೆ ಏರಿದ ಝಿಕಾ ಪ್ರಕರಣಗಳು

ಉತ್ತರ ಪ್ರದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನ್ಪುರ ಜಿಲ್ಲೆಯಲ್ಲಿ ಶನಿವಾರ 13 ಹೊಸ ಜನರು ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

🌐 Kannada News :

ಕಾನ್ಪುರ: ಉತ್ತರ ಪ್ರದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನ್ಪುರ ಜಿಲ್ಲೆಯಲ್ಲಿ ಶನಿವಾರ 13 ಹೊಸ ಜನರು ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ.

ಕಾನ್ಪುರ ಜಿಲ್ಲಾಡಳಿತವು ಆರೋಗ್ಯ ಮತ್ತು ಪುರಸಭೆಯ ಇಲಾಖೆಗಳ ಸಿಬ್ಬಂದಿಗಳೊಂದಿಗೆ ಪ್ರಕರಣಗಳನ್ನು ಗುರುತಿಸಲು ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ರೋಗಲಕ್ಷಣಗಳನ್ನು ಹೊಂದಿರುವವರನ್ನು ಗುರುತಿಸುತ್ತಿದ್ದಾರೆ. ಒಟ್ಟು 150 ತಂಡಗಳೊಂದಿಗೆ ನೈರ್ಮಲ್ಯ ಮತ್ತು ಫಾಗಿಂಗ್ ಮಾಡಲಾಗುತ್ತಿದೆ.

ಝಿಕಾ ವೈರಸ್ ಹರಡುವ ಹಿನ್ನೆಲೆಯಲ್ಲಿ ಜನರು ಆತಂಕ ಪಡಬೇಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ವೈರಸ್ ತಡೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮತ್ತೊಂದೆಡೆ ದೆಹಲಿ ಸರ್ಕಾರ ಕೂಡ ಅಲರ್ಟ್ ಆಗಿದೆ. ಉತ್ತರ ಪ್ರದೇಶ ಗಡಿ ರಾಜ್ಯವಾಗಿರುವುದರಿಂದ ದೆಹಲಿಯಲ್ಲಿ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today