ವೈರಲ್: ವ್ಯಕ್ತಿ ಮೃತಪಟ್ಟಿರುವುದನ್ನು ಖಚಿತಪಡಿಸಿದ ವೈದ್ಯರು.. ಶವಸಂಸ್ಕಾರಕ್ಕೂ ಮುನ್ನ ಶಾಕ್!
ಉತ್ತರಾಖಂಡದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ನಿದರ್ಶನ ಬೆಳಕೆಗೆ ಬಂದಿದೆ. ರೋಗಿಯು ಬದುಕಿರುವಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಉತ್ತರಾಖಂಡ: ಉತ್ತರಾಖಂಡದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಮತ್ತೊಂದು ನಿದರ್ಶನ ಬೆಳಕೆಗೆ ಬಂದಿದೆ. ರೋಗಿಯು ಬದುಕಿರುವಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕರಣ್ಪುರದ ಅಜಬ್ ಸಿಂಗ್ (60), ಅವರ ಕುಟುಂಬ ಸದಸ್ಯರು ಬಿಪಿ ಕುಸಿದಿದ್ದರಿಂದ ಅವರನ್ನು ಲಕ್ಸಾರ್ನ ಹಿಮಾಲಯನ್ ಆಸ್ಪತ್ರೆಗೆ ದಾಖಲಿಸಿದ್ದರು. ತುರ್ತು ಚಿಕಿತ್ಸಾ ಘಟಕದಲ್ಲಿರಿಸಿ.. 4 ದಿನ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು. ಶುಕ್ರವಾರ.. ಅಜಬ್ ಸಿಂಗ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ..
ವೆಂಟಿಲೇಟರ್ ತೆಗೆಯಲಾಗಿದೆ. ಉತ್ತಮ ಚಿಕಿತ್ಸೆ ನೀಡಿದರೂ ರೋಗಿಯ ಆರೋಗ್ಯ ಸುಧಾರಿಸಿಲ್ಲ ಎಂದು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ನಾಲ್ಕು ದಿನಗಳ ಚಿಕಿತ್ಸಾ ವೆಚ್ಚಕ್ಕಾಗಿ ರೋಗಿಯ ಕುಟುಂಬದಿಂದ 1,70,000 ರೂ. ಪಡೆದಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದೆ.
ವೃದ್ಧನಿಗೆ ಹಾಕಲಾಗಿದ್ದ ವೆಂಟಿಲೇಟರ್ ತೆಗೆದು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ದುಃಖತಪ್ತ ಕುಟುಂಬ ವೃದ್ಧನ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿದ್ದಾರೆ. ಅಂತ್ಯಕ್ರಿಯೆಗೂ ಮುನ್ನ ಸ್ನಾನ ಮಾಡಿಸುವಾಗ ವೃದ್ಧನ ದೇಹದಲ್ಲಿ ಚಾಲನೆ ಕಂಡುಬಂದಿದೆ, ಹಾಗೂ ಉಸಿರಾಡುತ್ತಿರುವುದನ್ನು ಕುಟುಂಬಸ್ಥರು ಗಮನಿಸಿದ್ದಾರೆ.
ತಕ್ಷಣ ಚಿಕಿತ್ಸೆಗಾಗಿ ಅವರನ್ನು ಲಕ್ಸಾರ್ನಲ್ಲಿರುವ ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಯಿತು. ಅವರಿಗೆ ಮೊದಲು ಚಿಕಿತ್ಸೆ ನೀಡಿದ ಆಸ್ಪತ್ರೆಯ ನಿರ್ವಹಣೆಯ ಬಗ್ಗೆ ಅಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಕುಟುಂಬ ಸದಸ್ಯರು ಹೇಳಿದ್ದಾರೆ.
Patient declared dead found breathing amidst funeral preparations in Uttarakhand
Follow Us on : Google News | Facebook | Twitter | YouTube