ನೀಟ್ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶಕ್ಕೆ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮನವಿ
CM Kumaraswamy and Siddaramaiah Request another opportunity to write a NEET 2019
ನೀಟ್ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶಕ್ಕೆ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮನವಿ – CM Kumaraswamy and Siddaramaiah Request another opportunity to write a NEET 2019
ನೀಟ್ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶಕ್ಕೆ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮನವಿ
ಬೆಂಗಳೂರು: ವಿದ್ಯಾರ್ಥಿಗಳ ಭವ್ಯ ಕನಸನ್ನು ಈಡೇರಿಸಿಕೊಳ್ಳುವ ಉದ್ದೇಶದಿಂದ ಒಂದು ವರ್ಷಗಳ ಕಾಲ ಸತತ ಅಭ್ಯಾಸ ಮಾಡಿ ನೀಟ್ ಪರೀಕ್ಷೆ ಬರೆದು ವೈದ್ಯಕೀಯ ಮತ್ತು ದಂತ ವೈದ್ಯ ಕೋರ್ಸ್ ಪ್ರವೇಶ ಪಡೆಯಬಹುದೆಂಬ ಆಸೆ ಭಂಗವಾಗಿದೆ ಕಾರಣ ರೈಲು ತಡವಾಗಿ ಬಂದಿದ್ದು. ಇಂದು ರಾಜ್ಯದ 4 ನಗರಗಳಲ್ಲಿ ನೀಟ್ ಪರೀಕ್ಷೆ ನಡೆದಿದೆ.
ಸಮಯ ಸರಿ ಇಲ್ಲ ಅಂತ ಅಂದಾಗ ತುಂಬಾ ತೊಂದರೆಗಳು ಆಗುತ್ತಿವೆ ಎಂಬಂತೆ ರೈಲು ತಡವಾಗಿ ಬಂದಿದ್ದರಿಂದ ಅನೇಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಿ ತಮ್ಮ ಕನಸನ್ನು ಈಡೇರಿಸಿಕೊಳ್ಳಲು ಪರದಾಡುವಂತಾಯಿತು. ಕೆಲವೆಡೆ ಗೊಂದಲ ಉಂಟಾಗಿದ್ದು, ಪರೀಕ್ಷೆ ಹಾಜರಾತಿ ಆಗದೆ ಇರುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಸಿ.ಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಪರೀಕ್ಷಾ ಕೇಂದ್ರ ಬದಲಾಗಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಮತ್ತೊಂದು ಕಡೆ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆಗಮಿಸುತ್ತಿದ್ದ ರೈಲು ವಿಳಂಬವಾಗಿದೆ. ಇದರಿಂದ 500 ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಿಂದ ಹೊರಗುಳಿಯುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರಾದ ಪಿಯುಷ್ ಗೊಯಲ್, ಪ್ರಕಾಶ್ ಜಾವಡೇಕರ್ ಅವರಿಗೆ ಈ ಕುರಿತು ಮನವಿ ಮಾಡಿರುವ ಅವರು, ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಅದೇ ರೀತಿ, ಮಾಜಿ ಸಿಎಂ ಸಿದ್ದರಾಮಯ್ಯ, ರೈಲು ವಿಳಂಬದಿಂದಾಗಿ ನೂರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದು, ನಿಮ್ಮ ಸಹೋದ್ಯೋಗಿ ಸಚಿವರಿಗೆ ಸರಿಯಾಗಿ ಕೆಲಸ ಮಾಡಲು ಹೇಳಿ. ರೈಲ್ವೇ ಸಚಿವರಿಗೆ ಜವಾಬ್ದಾರಿ ಇರಬೇಕಿತ್ತು ಎಂದು ಪ್ರಧಾನಿಗೆ ಟ್ವೀಟ್ ಮಾಡಿದ್ದಾರೆ. ಪರೀಕ್ಷೆ ವಂಚಿತರಿಗೆ ಮತ್ತೊಮ್ಮೆ ಅವಕಾಶ ಕೊಡಿ ಎಂದು ಹೇಳಿದ್ದಾರೆ.
Hundreds of students from North Karnataka districts have missed the #NEET Exam being held today at Bengaluru due to a 7-hour delay of the Hampi Express. A last-minute change in the exam centres and lack of proper communication of the same has created confusion among students. .
— CM of Karnataka (@CMofKarnataka) May 5, 2019
////
Web Title : ನೀಟ್ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶಕ್ಕೆ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಮನವಿ – CM Kumaraswamy and Siddaramaiah Request another opportunity to write a NEET 2019
Read Today’s Top News & Updates at Kannada News Today Live