Kannada News - Kannadigas Adda

Welcome To Kannada News - Kannadigas Adda

ಹಾಸನ, ಬರಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ಸೂಚನೆ

Hassan-instructed to handle the drought condition adequately

Kannadanews.today - ಕನ್ನಡಿಗಾಸ್ ಅಡ್ಡ

ಹಾಸನ : ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಬರ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು ಜಿಲ್ಲೆಯ 8 ತಾಲ್ಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಿತವಾಗಿದ್ದು ಜನ ಜಾನುವಾರಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಪರಿಸ್ಥಿತಿ ನಿಭಾಯಿಸಿ ಎಂದು ನಿರ್ದೇಶನ ನೀಡಿದರು.

ವಿವಿಧ ಇಲಾಖೆ ಅಧಿಕಾರಿಗಳಿಂದ ಮಳೆ, ಬೆಳೆ, ಜಾನುವಾರುಗಳ ವೇವಿನ ಲಭ್ಯತೆಗಳ ಬಗ್ಗೆ ಮಾಹಿತಿ ಪಡೆದ ನವೀನ್ ರಾಜ್ ಸಿಂಗ್ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಂಡು ಮಳೆ ಬಿದ್ದ ತಕ್ಷಣ ಬೇಡಿಕೆಯನುಸಾರ ಪೂರ್ಣಗೊಳಿಸಿ ಎಂದು ಹೇಳಿದರು.

ಮೇವಿನ ಕೊರತೆ ಎದುರಾಗಬಹುದಾದ ಅರಸೀಕೆರೆ ತಾಲ್ಲೂಕಿನಲ್ಲಿ ಅವಶ್ಯಕತೆ ಬಿದ್ದಾಗ ಮೇವಿನ ಬ್ಯಾಂಕ್ ಮತ್ತು ಗೋಶಾಲೆ ಪಡೆಯಲು ಸೂಕ್ತ ಪೂರ್ವ ಯೋಜನೆ ಸಿದ್ದ ಪಡಿಸಿಟ್ಟುಕೊಳ್ಳುವಂತೆ ಅವರು ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಬರಪರಿಹಾರ ಯೋಜನೆಗಳಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯಡಿ ಉಂಟಾಗಿರುವ ಬೆಳೆಹಾನಿಗಳಿಗೆ ಸೂಕ್ತ ರೀತಿ ಪರಿಹಾರ ಒದಗಿಸಿ ಎಂದು ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಅಂತರ್ಜಲ ಸಂರಕ್ಷಣೆ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ನೀರಿನ ಸದ್ಬಳಕೆ ಬಗ್ಗೆ ಇಲಾಖೆಗಳೂ ಮುತುವರ್ಜಿವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಮಲೆನಾಡು ಪ್ರದೇಶದಲ್ಲಿ ಮಂಗನಖಾಯಿಲೆ ಹರಡುತಿದೆ.ಹಾಸನ ಜಿಲ್ಲೆಯೂ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹೊಂದಿಕೊಂಡಿದೆ ಹಾಗಾಗಿ ಸಾರ್ವಜನಿಕರಿಗೆ ಮಂಗನ ಖಾಯಿಲೆ ಸ್ವರೂಪ ಮಂಗಗಳಿಂದ ದನಕರುಗಳಿಗೆ ಹೇಗೆ ರೋಗಾಣುಗಳು ಉಣ್ಣೆಯ ಮೂಲಕ ಹರಡುತ್ತವೆ ಮತ್ತು ಯಾವ ಸ್ವರೂಪದಲ್ಲಿ ಮನುಷ್ಯ ಮತ್ತು ನಂತರದಲ್ಲಿ ಅದು ಮಂಗಗಳಿಗೆ ಮಾರಣಾಂತಿಕವಾಗುತ್ತಿದೆ ಎಂಬ ಬಗ್ಗೆ ಅರಿವು ಮೂಡಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳೆ ದರ್ಶಕರ್ ಆ್ಯಪ್ ಮೂಲಕ ಬೆಳೆ ವಿವರ ಸವೀಕ್ಷೆಯಿಂದ ಹಲವು ಅನುಕೂಲಗಳಾಗುತ್ತಿದ್ದು ಸಮರ್ಪಕವಾಗಿ ಮಾಹಿತಿ ಗಣಕೀಕರಣವಾಗುವಂತೆ ಎಚ್ಚರವಹಿಸಿ ಎಂದು ನವೀನ್ ರಾಜ್ ಸಿಂಗ್ ತಿಳಿಸಿದರು.

ಜಿಲ್ಲಾಧಿಕಾರಿ ಅಕ್ರಂ ಪಾಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ:ವಿಜಯ ಪ್ರಕಾಶ್ ಅವರು ಜಿಲ್ಲೆಯ ಬರ ಪರಿಸ್ಥಿತಿ ಕುಡಿಯುವ ನೀರಿನ ಪೂರೈಕೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಜಿಲ್ಲೆಯಲ್ಲಿ ಈ ವರ್ಷ ಕುಡಿಯುವ ನೀರಿನ ಅಭಾವವನ್ನು ಸಮರ್ಪಕವಾಗಿ ನಿಬಾಯಿಸಲಾಗಿದೆ ಚುನಾವಣಾ ಕರ್ತವ್ಯದ ಜೊತೆಗೆ ಜನ ಸಾಮಾನ್ಯರ ಜೀವನ ನಿರ್ವಹಣೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಯೋಜನಾ ನಿರ್ದೇಶಕರಾದ ಅರುಣ್‍ಕುಮಾರ್, ಜಂಟಿ ಕೃಷಿ ನಿರ್ದೇಶಕರಾದ ಡಾ:ಮಧುಸೂಧನ್, ತೋಟಗಾರಿಕೆ ಉಪ ನಿರ್ದೇಶಕರಾದ ಮಂಜುನಾಥ್, ಪಶು ಸಂಗೋಪನೆ ಇಲಾಖೆ ಉಪ ನಿರ್ದೆಶಕರಾದ ಡಾ|| ವೀರಭದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಸುಧಾ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Quick Links : Film News | Politics News | Crime News | Health Tips | India News | World News | Tech News | Jokes | Food & Recipes | ದಿನಭವಿಷ್ಯ

ನಮ್ಮ Kannada News ತಾಣ ಇಷ್ಟವಾಗಿದ್ದರೆ, YouTube - Live News Channel ಗೆ ಚಂದಾದಾರರಾಗಿ. ತ್ವರಿತ ಕನ್ನಡ ನ್ಯೂಸ್ ಗಾಗಿ ನಮ್ಮನ್ನು News Videos ಸಮೇತ Twitter, Instagram ಮತ್ತು Facebook ನಲ್ಲಿ ಸಹ ಕಾಣಬಹುದು.