ಹಿರಿಯ ನಟ-ಕಾಶಿನಾಥ್ ವಿಧಿವಶ-Senior actor-Kashinath is no more
Senior actor-Kashinath is no more | itskannada
ಬೆಂಗಳೂರು: ( itskannada ) ಹಿರಿಯ ನಟ-ಕಾಶಿನಾಥ್ ವಿಧಿವಶ.Senior actor-Kashinath is no more
ಅನಾರೋಗ್ಯದಿಂದ ಎರಡು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ಕಾಶಿನಾಥ್ ವಿಧಿವಶ ರಾಗಿದ್ದಾರೆ. ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದಾರೆ.ಅಪಾರ ಅಭಿಮಾನಿ ಬಳಗ ಪತ್ನಿ, ಇಬ್ಬರು ಗಂಡು ಮಕ್ಕಳನ್ನ ಕಾಶಿನಾಥ್ ಅಗಲಿದ್ದಾರೆ.ಕಾಶೀನಾಥ್ ಕನ್ನಡ ಚಿತ್ರರಂಗದಲ್ಲಿ ಅನೇಕರಿಗೆ ಗಾಡ್ ಫಾದರ್ ಆಗಿದ್ದವರು. ಅವರ ಜೊತೆಯಲ್ಲಿ ಕೆಲಸ ಮಾಡಿದ ಹಲವು ಪ್ರತಿಭೆಗಳು ಇಂದು ಸ್ಯಾಂಡಲ್ ವುಡ್ ನಲ್ಲಿ ಅತ್ಯುನ್ನುತ ಸ್ಥಾನದಲ್ಲಿದ್ದಾರೆ.
ಹಿರಿಯ ನಟ-ಕಾಶಿನಾಥ್ ವಿಧಿವಶ
ಒಟ್ಟಾರೆ ಸುಮಾರು 43 ಸಿನಿಮಾಗಳಲ್ಲಿ ಕಾಶಿನಾಥ್ ನಟಿಸಿದ್ದರು. ಅಮರ ಮಧುರು ಪ್ರೇಮ, ಅನುಭವ, ಅನಾಮಿಕ, ಅಜಗಜಾಂತರ, ಶ್, ಅನಂತನ ಅವಾಂತರ ಮುಂತಾದ ಸಿನಿಮಾಗಳಲ್ಲಿ ಕಾಶಿನಾಥ್ ನಟಿಸಿದ್ದರು. ಉಪೇಂದ್ರರಂತಹ ಕಲಾವಿದರ ಬೆಳವಣಿಗೆಗೆ ಕಾರಣಕರ್ತ ಹಾಗೂ ಪರಿಚಯಿಸಿದ ಹೆಗ್ಗಳಿಕೆ ಕಾಶಿನಾಥ್ ಅವರದ್ದು.
11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್ವುಡ್ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.
ಕಾಶೀನಾಥ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ. ಇವರು ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಇವರು ಉಪೇಂದ್ರ, ಮನೋಹರ್, ಸುನೀಲ್ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು. ಕಾಶೀನಾಥ್ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೆಬ್ಬಿಸಿದವರು. ಅವರು ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ. ಅವರ ವಿಭಿನ್ನ ಶೈಲಿಯ ಚಿತ್ರಗಳು ಯಶಸ್ಸಿನ ಉತ್ತುಂಗಕ್ಕೇರಿ ಗಲ್ಲಾಪೆಟ್ಟಿಗೆಯನ್ನು ಸೂರೆ ಹೊಡೆದವು. ಅವರ ಗರಡಿಯಲ್ಲಿ ಪಳಗಿದ ಅನೇಕ ಯುವಕರು ಇಂದು ಚಿತ್ರರಂಗದಲ್ಲಿ ಬಹಳ ಯಶಸ್ವಿಯಾಗಿದ್ದಾರೆ. ಅವರ ಚಿತ್ರಗಳಲ್ಲಿ ಪ್ರಮುಖವಾದವು ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ, ಅವರ ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯವಾಗಿವೆ. ಇವರ ಅಜಗಜಾಂತರ(೧೯೯೧) ಎಂಬ ಚಿತ್ರವನ್ನು ಹಿಂದಿಯಲ್ಲಿ ಜುದಾಯಿ (೧೯೯೭) ಎಂದು ರೀಮೇಕ್ ಮಾಡಲಾಗಿದೆ. ಇದರಲ್ಲಿ ಅನಿಲ್ ಕಪೂರ್, ಶ್ರೀದೇವಿ ಹಾಗೂ ಊರ್ಮಿಳಾ ಮಾತೋಂಡ್ಕರ್ ಅಭಿನಯಿಸಿದ್ದಾರೆ.ಇವರು ಕಡಿಮೆ ವೆಚ್ಛದಲ್ಲಿ ಉತ್ತಮ ಚಿತ್ರಗಳನ್ನು ನಿರ್ಮಿಸುವಲ್ಲಿ ಸಿದ್ಧಹಸ್ತರು. ( from wikipedia)-itskannada
Senior actor-Kashinath is no more , ಹಿರಿಯ ನಟ-ಕಾಶಿನಾಥ್ ವಿಧಿವಶ
ಇಟ್ಸ್ ಕನ್ನಡ : ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ ಲೈಕ್ ಮಾಡಿ. ಕನ್ನಡ ಸುದ್ದಿಗಳಿಗಾಗಿ ಸುದ್ದಿ-ಸುತ್ತ ಪುಟ ಕ್ಲಿಕ್ಕಿಸಿ ಅಥವಾ ಇಟ್ಸ್ ಕನ್ನಡ ಸುದ್ದಿ ಪುಟ –ಕನ್ನಡ ಸುದ್ದಿಗಳು-ಇಲ್ಲವೇ ವಿಭಾಗ ಕರ್ನಾಟಕ ಸುದ್ದಿಗಳು ಕ್ಲಿಕ್ಕಿಸಿ itskannada :News-Entertainment-Information: for latest news visit-Kannada news– more in Kannada News click Kannada News or look at Karnataka News