Kannada News - Kannadigas Adda

Welcome To Kannada News - Kannadigas Adda

ಮಹಿಳೆ ಉನ್ನತ ಮಟ್ಟಕ್ಕೇರಲು ಸಮಾನತೆ ನೀಡಬೇಕು : ಪುಟ್ಟಸ್ವಾಮಿ

The woman should be equal-Puttaswamy

Kannadanews.today - ಕನ್ನಡಿಗಾಸ್ ಅಡ್ಡ

ಹಾಸನ : ಆಧುನಿಕ ಯುಗದಲ್ಲಿ ಸ್ತ್ರೀ ಮುಂಚೂಣಿಯಲ್ಲಿದ್ದು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹೆಚ್.ಸಿ ಪುಟ್ಟಸ್ವಾಮಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ : ಸಂತ್ರಸ್ತ ಮಗುವಿನ ಗುರುತು ಬಹಿರಂಗ ಪಡಿಸದಿರಿ

ಗ್ರಾಮೀಣ ಪ್ರದೇಶ, ಹಳ್ಳಿಗಾಡು ಪ್ರದೇಶಗಳಲ್ಲಿ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಮುಂತಾದವುಗಳು ಕೊನೆಗಾಣಬೇಕಿದೆ. ಮಹಿಳೆಯರು ಉನ್ನತ ಮಟ್ಟಕ್ಕೇರಲು ಮನೆಯವರಿಂದಲೇ ಪ್ರೋತ್ಸಾಹ ಹಾಗೂ ಸಮಾನತೆಯನ್ನು ನೀಡಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ತೋರಿಸಿರುವುದರಿಂದ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕು, ಪ್ರೋತ್ಸಾಹಿಸಬೇಕು ಎಂದರು.

ಮಹಿಳೆಯರಿಗೆ ಎಷ್ಟೇ ಸಮಸ್ಯೆ ಇದ್ದರೂ ಮುಂದಿನ ಧೃತಿಗೆಡದೆ ಜೀವನ ಸುಧಾರಿಸಿಕೊಳ್ಳುವ ಆತ್ಮಸ್ಥೈರ್ಯವಿರಬೇಕು ಎಂದರಲ್ಲದೆ ಬರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ನಮ್ಮ ಹಕ್ಕು, ನಮ್ಮ ಹಕ್ಕನ್ನು ನಾವು ಚಲಾಯಿಸೋಣ ಎಂದು ಪುಟ್ಟಸ್ವಾಮಿ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರೂಪಣಾಧಿಕಾರಿ ನಾಗರಾಜು ಮಾತನಾಡಿ ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ, ಸಾಕಷ್ಟು ಸಾಧನೆಗಳನ್ನು ಮಾಡಿದ್ದು, ಸಾಮಾಜಿಕ ಸಮಸ್ಯೆಗಳನ್ನು ಎದುರಿಸಿ ಮುನ್ನಡೆಯುತ್ತಿದ್ದಾರೆ ಎಂದರು.

ಇದನ್ನೂ ಓದಿ : ಲೋಕಸಭಾ ಚುನಾವಣೆ : ವ್ಯವಸ್ಥಿತ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಮಹಿಳೆಯರು ಆರ್ಥಿಕವಾಗಿ ಅಭಿವೃದಿಯಾಗಬೇಕು. 18 ವರ್ಷ ತುಂಬಿದವರು ಯಾರೂ ಕೂಡ ಯಾರು ಸಹಾ ಮತದಾನದಿಂದ ವಂಚಿತರಾಗಬಾರದು ಹೋಬಳಿ ಮಟ್ಟದಲ್ಲಿ, ಗ್ರಾಮ ಪಂಚಾಯಿತಿ ಹಂತಗಳಲ್ಲಿ ಮತದಾನದ ಅರಿವು ಮೂಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳಾದ ದೇವರಾಜೇಗೌಡ ಅವರು ಮತದಾನದ ಪ್ರತಿಜ್ಞೆಯನ್ನು ಬೋಧಿಸಿದರು.

ಇದನ್ನೂ ಓದಿ : ಚುನಾವಣಾ ಕರ್ತವ್ಯ ಲೋಪ ಸೇವೆಯಿಂದ ಅಮಾನತ್ತು

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಪಾಪಬೋವಿ, ಅಂಗವಿಕಲ ಕಲ್ಯಾಣಾಧಿಕಾರಿ ಮಲ್ಲೇಶ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ರೂಪ ಮತ್ತಿತರರು ಹಾಜರಿದ್ದರು. ಮತದಾನ ಜಾಗೃತಿ ಜಾಥಾ: ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾನ ಜಾಗೃತಿ ಜಾಥಾಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಪಾಪಬೋವಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ನಿರೂಪಣಾಧಿಕಾರಿ ನಾಗರಾಜು, ಶಿಶು ಅಭಿವೃದ್ದಿ ಯೋಜನಾಧಿಕಾರಿ ರೂಪ ಹಾಜರಿದ್ದರು.

Quick Links : Film News | Politics News | Crime News | Health Tips | India News | World News | Tech News | Jokes | Food & Recipes | ದಿನಭವಿಷ್ಯ

ನಮ್ಮ Kannada News ತಾಣ ಇಷ್ಟವಾಗಿದ್ದರೆ, YouTube - Live News Channel ಗೆ ಚಂದಾದಾರರಾಗಿ. ತ್ವರಿತ ಕನ್ನಡ ನ್ಯೂಸ್ ಗಾಗಿ ನಮ್ಮನ್ನು News Videos ಸಮೇತ Twitter, Instagram ಮತ್ತು Facebook ನಲ್ಲಿ ಸಹ ಕಾಣಬಹುದು.