ಅಭಿನಯ ಚತುರ, ರಂಗಭೂಮಿ ಕಲಾವಿದ, ಚಿತ್ರರಂಗದ ಹಿರಿಯ ಪೋಷಕ ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

theatre artist Master Hirannaiah passes away

ಅಭಿನಯ ಚತುರ, ರಂಗಭೂಮಿ ಕಲಾವಿದ, ಚಿತ್ರರಂಗದ ಹಿರಿಯ ಪೋಷಕ ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ – theatre artist Master Hirannaiah passes away

ಅಭಿನಯ ಚತುರ,ರಂಗಭೂಮಿ ಕಲಾವಿದ, ಚಿತ್ರರಂಗದ ಹಿರಿಯ ಪೋಷಕ ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ….

ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇಂದು ಸಂಜೆ ಆರು ಗಂಟೆಗೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಣ್ಣಯ್ಯ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.

ಲಂಚ ತಿನ್ಲಿ, ಆದ್ರೆ ಎಷ್ಟು ಬೇಕೋ ಅಷ್ಟೇ ತಿನ್ಲಿ : ಮಾಸ್ಟರ್ ಹಿರಣ್ಣಯ್ಯ

ಮಾಸ್ಟರ್ ಹಿರಣ್ಣಯ್ಯ ಅವರ ಲಂಚಾವತಾರ ನಾಟಕ ದೊಡ್ಡ ಮಟ್ಟಕ್ಕೆ ಖ್ಯಾತಿಗಳಿಸಿದೆ. ರಾಜಕೀಯವನ್ನು ವಿಡಂಬನಾತ್ಮವಾಗಿ ಹೇಳುತ್ತಿದ್ದ ಲಂಚಾವತಾರ ನಾಟಕ ಸುಮಾರು 1000 ಪ್ರದರ್ಶನಗಳನ್ನು ನೀಡಿದೆ.

ಮಾತಿನ ಮೂಲಕವೆ ರಾಜಕಾರಣಿಗಳನ್ನು ತಿವಿಯುತ್ತಿದ್ದ ಮಾಸ್ಟರ್ ಹಿರಣ್ಣಯ್ಯ ಅವರು ನಾಟಕಗಳ ಜೊತೆಗೆ ಚಿತ್ರರಂಗದಲ್ಲು ಖ್ಯಾತಿ ಗಳಿಸಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಮಾಸ್ಟರ್ ಹಿರಣ್ಣಯ್ಯ ಅವರು ಕೊನೆಯದಾಗಿ ಸುನೀಲ್ ಕುಮಾರ್ ದೇಸಾಯಿ ಅವರ ‘ರೇ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇನ್ನು ಇಚ್ಚೀತಿಗಷ್ಟೆ ರಮೇಶ್ ಅರವಿಂದ್ ನಿರ್ದೇಶನದ ‘ಬಟರ್ ಫ್ಲೈ’ ಸಿನಿಮಾದ ಹಾಡಿನಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರು ಬರೆದ ಸಾಲುಗಳನ್ನು ಬಳಸಿಕೊಳ್ಳಲಾಗಿದೆ. ಈ ಹಾಡಿಗೆ ಬಿಗ್ ಬಿ ಅಮಿತಾ ಬಚ್ಚನ್ ದ್ವನಿ ನೀಡಿದ್ದಾರೆ.

ಲಂಚ ಸಾಮ್ರಾಜ್ಯ, ನಂ.73 ಶಾಂತಿ ನಿವಾಸ, ಗಜ ಸೇರಿದಂತೆ 30 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿದೆ.///

Web Title : ಅಭಿನಯ ಚತುರ, ರಂಗಭೂಮಿ ಕಲಾವಿದ, ಚಿತ್ರರಂಗದ ಹಿರಿಯ ಪೋಷಕ ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ – theatre artist Master Hirannaiah passes away – Kannada News