Breaking News, ಕರ್ನಾಟಕದಲ್ಲಿ 10 ದಿನಗಳ ನೈಟ್ ಕರ್ಫ್ಯೂ – 28 ರಿಂದ ಜಾರಿ
Night curfew in Karnataka : 28 ರಿಂದ ಮುಂದಿನ 10 ದಿನಗಳ ಕಾಲ ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
Night curfew in Karnataka : 28 ರಿಂದ ಮುಂದಿನ 10 ದಿನಗಳ ಕಾಲ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಮತ್ತು ಓಮಿಕ್ರಾನ್ ವೈರಸ್ ಹರಡುವುದನ್ನು ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ತಜ್ಞರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಕೊರೊನಾ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಕೂಲಂಕಷವಾಗಿ ಚರ್ಚಿಸಲಾಯಿತು.
ಕರ್ನಾಟಕದಲ್ಲಿ 10 ದಿನಗಳ ನೈಟ್ ಕರ್ಫ್ಯೂ
ಈ ಸಮಾಲೋಚನಾ ಸಭೆಯಲ್ಲಿ ಹೊಸ ವರ್ಷಾಚರಣೆ ವೇಳೆ ಕರೋನಾ ಹರಡುವ ಸಾಧ್ಯತೆಯಿರುವುದರಿಂದ 28 ರಿಂದ 10 ದಿನಗಳ ನೈಟ್ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಯಿತು.
ಅದರಂತೆ, 28 ರಿಂದ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಕರ್ನಾಟಕ ಸರ್ಕಾರದ ಈ ಆದೇಶದಿಂದಾಗಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ರಾಜ್ಯದಲ್ಲಿ ಹೊಸ ವರ್ಷವನ್ನು ಆಚರಿಸಲು ಸಾಧ್ಯವಾಗುವಿದಿಲ್ಲ. ರಾತ್ರಿ ಹತ್ತು ಘಂಟೆಯ ಬಳಿಕ ಹೊರಗಡೆ ಓಡಾಡುವುದು ಆಚರಿಸುವುದು ನಿಷೇದಿಸಲಾಗಿದೆ.
ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಭಾನುವಾರ ತಜ್ಞರೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಚರ್ಚಿಸಿ ಸೂಕ್ತ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಬೊಮ್ಮಾಯಿ ಶನಿವಾರ ಹುಬ್ಬಳ್ಳಿಯಲ್ಲಿ ತಿಳಿಸಿದ್ದರು.
Follow Us on : Google News | Facebook | Twitter | YouTube