ಸ್ನೇಹಿತರ ಜೊತೆ ನದಿಗೆ ಈಜಲು ಇಳಿದ 15 ವರ್ಷದ ಬಾಲಕ ದುರಂತ ಸಾವು

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ 15 ವರ್ಷದ ಬಾಲಕ ವೇದಾವತಿ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಬಳ್ಳಾರಿ: ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ರಾರಾವಿ ಗ್ರಾಮದ ಓಂ ಪ್ರಸಾದ್ (15) ತನ್ನ ಸ್ನೇಹಿತರೊಂದಿಗೆ ವೇದಾವತಿ ನದಿಗೆ (Vedavathi River) ಈಜಲು ತೆರಳಿದ್ದ. ಈ ವೇಳೆ ನದಿಯ ನೀರಿನ ಆಳದ ಅರಿವಿಲ್ಲದೆ ನೀರಿಗೆ ಇಳಿದಿದ್ದಾನೆ ಎನ್ನಲಾಗಿದೆ.

ನೀರಿನಲ್ಲಿ ಇಳಿದ ಕೆಲವೇ ಸಮಯದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಬಾಲಕ ಮುಳುಗಿ ಕಾಣೆಯಾಗಿದ್ದ. ಸ್ನೇಹಿತರಿಂದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ (Fire and Emergency Services) ಮಾಹಿತಿ ನೀಡಲಾಗಿತ್ತು.

ಇದನ್ನೂ ಓದಿ: ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ; ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ನದಿಯಲ್ಲಿ ಶೋಧ ಕಾರ್ಯ ಆರಂಭಿಸಿದರು. ಮಂಗಳವಾರ ಸಂಜೆ ಆರಂಭವಾದ ಕಾರ್ಯಾಚರಣೆ ಬಳಿಕ ಇಂದು ಬೆಳಗ್ಗೆ ಬಾಲಕನ ಶವ ಪತ್ತೆಯಾಗಿದೆ.

ಮೃತ ಓಂ ಪ್ರಸಾದ್ 10ನೇ ತರಗತಿಯಲ್ಲಿ ಓದುತ್ತಿದ್ದ. ಬಾಲಕನ ಸಾವಿನಿಂದ ಕುಟುಂಬಸ್ಥರು ಹಾಗೂ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪಳ: ಟ್ರಕ್‌ಗೆ ಸ್ಕೂಟಿ ಡಿಕ್ಕಿ, ಕೆಲಸಕ್ಕೆ ಹೊರಟಿದ್ದ ಕಾರ್ಮಿಕ ಸ್ಥಳದಲ್ಲೇ ಸಾವು

ಘಟನೆ ಕುರಿತು ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ (Siruguppa Police) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories