ದೀಪಾವಳಿ ದಿನವೇ ದುರಂತ; ಸಿಡಿಮದ್ದು ಸ್ಫೋಟ, ಬಾಲಕನ ತಲೆ ಛಿದ್ರ ಛಿದ್ರ

Diwali Tragedy: ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂದರಕಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ವೇಳೆ ದುರಂತ ಸಂಭವಿಸಿದ್ದು, ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸಿಡಿಮದ್ದನ್ನು ಪಟಾಕಿ ಎಂದು ಭಾವಿಸಿ ಹಚ್ಚಿದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Diwali Tragedy: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಕ್ಷಣಾರ್ಧದಲ್ಲಿ ದುಃಖ ಆವರಿಸಿದೆ. ಪಟಾಕಿ ಸಿಡಿಸುವ ಸಂಭ್ರಮದಲ್ಲಿ ತೊಡಗಿದ್ದ 15 ವರ್ಷದ ಬಾಲಕನೊಬ್ಬ ಸಿಡಿಮದ್ದು ಸ್ಫೋಟಕ್ಕೆ ಬಲಿಯಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಸೇಡಂ (Sedam) ತಾಲೂಕಿನ ಹಂದರಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತ ಬಾಲಕನನ್ನು ಭೀಮರಾಯ ಎಂದು ಗುರುತಿಸಲಾಗಿದೆ. ಕೃಷಿ ಜಮೀನಿನಲ್ಲಿ ಬೆಳೆಗಳಿಗೆ ಹಾನಿ ಮಾಡುತ್ತಿದ್ದ ಕಾಡುಹಂದಿಗಳನ್ನು ಓಡಿಸಲು ತಂದೆ ತಂದಿಟ್ಟಿದ್ದ ಸಿಡಿಮದ್ದು ಈ ದುರಂತಕ್ಕೆ ಕಾರಣವಾಗಿದೆ.

ಸಿಡಿಮದ್ದನ್ನು ಪಟಾಕಿ ಎಂದು ಭಾವಿಸಿದ ಬಾಲಕ ಅದಕ್ಕೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಆದರೆ ಬೆಂಕಿ ತಗುಲಿದ ಕೆಲವೇ ಕ್ಷಣಗಳಲ್ಲಿ ಅದು ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಬ್ಬದ ದಿನ ಮನೆಯಲ್ಲಿರಬೇಕಿದ್ದ ಸಂತಸದ ವಾತಾವರಣ ದುರಂತದಿಂದಾಗಿ ಶೋಕದಲ್ಲಿ ಮುಳುಗಿದೆ. ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸೇಡಂ ಪೊಲೀಸರು (Sedam Police) ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೃಷಿ ಉದ್ದೇಶಕ್ಕೆ ಬಳಸುವ ಸಿಡಿಮದ್ದುಗಳನ್ನು ಮಕ್ಕಳ ಕೈಗೆ ಸಿಗದಂತೆ ಸುರಕ್ಷಿತವಾಗಿ ಇರಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories