ಕರ್ನಾಟಕ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಕರ್ನಾಟಕದಲ್ಲಿ 2027ರ ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆಗಳಿಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕಗಳನ್ನು ಗಮನಿಸಿ ಓದು ಮತ್ತು ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕಿದೆ.

ಬೆಂಗಳೂರು (Bengaluru): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2027ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನದ ಯೋಜನೆ ರೂಪಿಸಿಕೊಳ್ಳುವುದು ಮುಖ್ಯವಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಯಾವಾಗ?
2027ರ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam-1) ಫೆಬ್ರವರಿ 27ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಲಿದೆ. ಫೆಬ್ರವರಿ 27ರಂದು ಕನ್ನಡ/ಅರೇಬಿಕ್ ಪರೀಕ್ಷೆಯೊಂದಿಗೆ ಆರಂಭವಾಗುವ ಪರೀಕ್ಷೆಗಳು ಮಾರ್ಚ್ 17ರಂದು ಹಿಂದಿ ಪರೀಕ್ಷೆಯೊಂದಿಗೆ ಮುಕ್ತಾಯಗೊಳ್ಳಲಿವೆ.
ಬಹುತೇಕ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿವೆ. ಹಿಂದೂಸ್ತಾನಿ ಸಂಗೀತ ಹಾಗೂ ಕೆಲವು ವೃತ್ತಿಪರ ವಿಷಯಗಳಿಗೆ ಮಾತ್ರ 2 ಗಂಟೆ 15 ನಿಮಿಷಗಳ ಪರೀಕ್ಷಾ ಅವಧಿ ನಿಗದಿಪಡಿಸಲಾಗಿದೆ.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಾರ್ಚ್ 6ರಂದು ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಮಾರ್ಚ್ 10ರಂದು ಪರೀಕ್ಷೆ ಇರುವುದಿಲ್ಲ.
ಇದನ್ನೂ ಓದಿ: ಕರ್ನಾಟಕದಲ್ಲಿ ನಾಳೆ ಮಳೆ ಜೋರು! ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ
ವಿಷಯವಾರು ವೇಳಾಪಟ್ಟಿಯಲ್ಲಿ ಮಾರ್ಚ್ 1ರಂದು ಇಂಗ್ಲಿಷ್, ಮಾರ್ಚ್ 2ರಂದು ಪ್ರಾದೇಶಿಕ ಭಾಷೆಗಳು, ಮಾರ್ಚ್ 3ರಂದು ಭೂಗೋಳ ಶಾಸ್ತ್ರ ಮತ್ತು ಮನಃಶಾಸ್ತ್ರ, ಮಾರ್ಚ್ 4ರಂದು ಸಮಾಜಶಾಸ್ತ್ರ ಹಾಗೂ ಭೌತಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 5ರಂದು ಲೆಕ್ಕಶಾಸ್ತ್ರ, ಮಾರ್ಚ್ 8ರಂದು ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ ಮತ್ತು ಗಣಿತ, ಮಾರ್ಚ್ 9ರಂದು ಅರ್ಥಶಾಸ್ತ್ರ ಹಾಗೂ ಭೂಗರ್ಭ ಶಾಸ್ತ್ರ ಪರೀಕ್ಷೆ ನಿಗದಿಯಾಗಿದೆ.
ಮಾರ್ಚ್ 11ರಂದು ಹಿಂದೂಸ್ತಾನಿ ಸಂಗೀತ ಮತ್ತು ವೃತ್ತಿಪರ ವಿಷಯಗಳು, ಮಾರ್ಚ್ 12ರಂದು ವ್ಯವಹಾರ ಅಧ್ಯಯನ ಹಾಗೂ ಗಣಿತ, ಮಾರ್ಚ್ 13ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ ಮತ್ತು ಗೃಹವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 15ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಕಶಾಸ್ತ್ರ ಹಾಗೂ ಮಾರ್ಚ್ 16ರಂದು ಇತಿಹಾಸ, ಸಂಖ್ಯಾಶಾಸ್ತ್ರ ಮತ್ತು ವಿದ್ಯುನ್ಮಾನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: ಈ ದಾಖಲೆಗಳು ರೆಡಿ ಇರಲಿ! ಮನೆ-ಮನೆಗೆ ತೆರಳಿ ಮರುಪರಿಶೀಲನೆ ಆರಂಭ
SSLC ಪರೀಕ್ಷೆ-1 ಯಾವಾಗ?
ಇನ್ನು 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಮಾರ್ಚ್ 22ರಿಂದ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಗೆ ಅಗತ್ಯ ಸಮಯ ದೊರೆಯುವಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ವಿಷಯವಾರು ನಿಗದಿಯಾಗಿರುವ ದಿನಾಂಕಗಳ ಪ್ರಕಾರ, ಪ್ರಥಮ ಭಾಷೆ ಕನ್ನಡದ ನಂತರ ಮಾರ್ಚ್ 27ರಂದು ದ್ವಿತೀಯ ಭಾಷೆ, ಮಾರ್ಚ್ 30ರಂದು ಗಣಿತ ಮತ್ತು ಸಮಾಜಶಾಸ್ತ್ರ, ಏಪ್ರಿಲ್ 2ರಂದು ತೃತೀಯ ಭಾಷೆ ಹಾಗೂ NSQF ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 3ರಂದು JTS ಮತ್ತು ಅರ್ಥಶಾಸ್ತ್ರ ಹಾಗೂ ಏಪ್ರಿಲ್ 5ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಹಸು, ಎಮ್ಮೆ ಖರೀದಿಗೆ ಶೇ.25ರಷ್ಟು ಸಹಾಯಧನ! ಹೈನುಗಾರಿಕೆಗೆ ಸರ್ಕಾರದ ಪ್ರೋತ್ಸಾಹ
ವಿದ್ಯಾರ್ಥಿಗಳು ಈಗಿನಿಂದಲೇ ಪ್ರತಿಯೊಂದು ವಿಷಯಕ್ಕೂ ಪ್ರತ್ಯೇಕ ಓದುವ ಸಮಯ ನಿಗದಿಪಡಿಸಿಕೊಂಡು, ಹಿಂದಿನ ಪ್ರಶ್ನೆಪತ್ರಿಕೆಗಳನ್ನು ಅಭ್ಯಾಸ ಮಾಡುವುದು ಉತ್ತಮ. ಪರೀಕ್ಷಾ ದಿನಾಂಕಗಳು ಪ್ರಕಟವಾಗಿರುವುದರಿಂದ ಕೊನೆಯ ಕ್ಷಣದ ಓದಿಗೆ ಕಾಯದೆ ದಿನನಿತ್ಯದ ಅಧ್ಯಯನಕ್ಕೆ ಆದ್ಯತೆ ನೀಡುವುದು ಹೆಚ್ಚು ಸಹಾಯಕವಾಗಲಿದೆ.
ಈ ವೇಳಾಪಟ್ಟಿಗಳು ತಾತ್ಕಾಲಿಕವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅಧಿಕೃತವಾಗಿ ಪ್ರಕಟಿಸಿರುವ ವೇಳಾಪಟ್ಟಿಯಲ್ಲಿನ ಅಂತಿಮ ಬದಲಾವಣೆಗಳನ್ನು ವಿದ್ಯಾರ್ಥಿಗಳು ಗಮನಿಸಬೇಕು.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



