ದಾವಣಗೆರೆ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಕಾಮುಕನಿಗೆ 21 ವರ್ಷ ಜೈಲು ಶಿಕ್ಷೆ

ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಾವಣಗೆರೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಪರಾಧಿಗೆ ಜೈಲು ಶಿಕ್ಷೆ, ದಂಡ ವಿಧಿಸುವುದರ ಜೊತೆಗೆ ಸಂತ್ರಸ್ತೆಗೆ ಪರಿಹಾರ ನೀಡಲು ಆದೇಶಿಸಿದೆ.

  • ಅಪರಾಧಿಗೆ 21 ವರ್ಷ ಜೈಲು ಶಿಕ್ಷೆ
  • 30 ಸಾವಿರ ರೂಪಾಯಿ ದಂಡ
  • ಸಂತ್ರಸ್ತೆಗೆ 10.50 ಲಕ್ಷ ಪರಿಹಾರ

ದಾವಣಗೆರೆ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ (POCSO Court) 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಹೊನ್ನಾಳಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿತ್ತು. 24 ವರ್ಷದ ಯುವಕನೊಬ್ಬ ಮಾನಸಿಕ ಅಸ್ವಸ್ಥತೆ ಹೊಂದಿದ್ದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ವಿಚಾರ 2024ರಲ್ಲಿ ಬೆಳಕಿಗೆ ಬಂದಿತ್ತು. ಘಟನೆ ಸಂಬಂಧ ಪೊಲೀಸರು ಪೋಕ್ಸೋ ಕಾಯ್ದೆಯಡಿ (POCSO Act) ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಲಭ್ಯವಾದ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯ ಅಪರಾಧವನ್ನು ದೃಢಪಡಿಸಿದೆ. ಈ ಹಿನ್ನೆಲೆಯಲ್ಲಿ ಆತನಿಗೆ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಜೈಲು ಶಿಕ್ಷೆಯ ಜೊತೆಗೆ 30 ಸಾವಿರ ರೂಪಾಯಿ ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಅಲ್ಲದೆ, ಸಂತ್ರಸ್ತ ಬಾಲಕಿಗೆ 10.50 ಲಕ್ಷ ರೂಪಾಯಿ ಪರಿಹಾರ (Compensation) ನೀಡುವಂತೆ ಆದೇಶಿಸಿದೆ.

ಸಂತ್ರಸ್ತೆಯ ಪರವಾಗಿ ಸರ್ಕಾರಿ ವಕೀಲೆ ಗೋಪಿಕಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಪ್ರಕರಣದಲ್ಲಿ ಬಾಲಕಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ಮಹತ್ವ ಪಡೆದಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories