ಕರ್ನಾಟಕ ರಾಜ್ಯದಲ್ಲಿ ಇಂದು 254 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಮೂರು ಸಾವು

ರಾಜ್ಯದಲ್ಲಿ ಮಾರಣಾಂತಿಕ ಕೋವಿಡ್ ಹಾವಳಿ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 254 ಹೊಸ ಪ್ರಕರಣಗಳು ಪತ್ತೆಯಾಗಿವೆ.

🌐 Kannada News :

ಬೆಂಗಳೂರು (Bengaluru) : ರಾಜ್ಯದಲ್ಲಿ ಮಾರಣಾಂತಿಕ ಕೋವಿಡ್ (Covid-19) ಹಾವಳಿ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 254 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 254 ಹೊಸ ಪ್ರಕರಣಗಳು ಪತ್ತೆಯಾಗಿವೆ, ಹೀಗಾಗಿ ಒಟ್ಟು ಪ್ರಕರಣಗಳ ಸಂಖ್ಯೆ 29,94,255 ಕ್ಕೆ ಏರಿದೆ. ಅದೇ ರೀತಿ ಇಂದು ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಕೋವಿಡ್ ಸಾವಿನ ಸಂಖ್ಯೆ 38,185ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 546 ಮಂದಿ ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,49,629ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,412 ಕ್ಕೆ ಇಳಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 152 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಂದು ಸಾವು ವರದಿಯಾಗಿದೆ. ಆ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,55,440 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,326 ಕ್ಕೆ ಏರಿದೆ. ನಗರದಲ್ಲಿ ಇಂದು ಒಟ್ಟು 464 ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟು ಗುಣಮುಖರ ಸಂಖ್ಯೆ 12,33,996 ಕ್ಕೆ ಏರಿಕೆಯಾಗಿದೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today