ಚಿತ್ರದುರ್ಗ: ಲಾರಿಗೆ ಕಾರು ಡಿಕ್ಕಿ, ಮೂವರು ಯುವಕರು ಸ್ಥಳದಲ್ಲೇ ಸಾವು
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- ಲಾರಿ ಟೈರ್ ಸಿಡಿದು ಅಪಘಾತ
- ಮೂವರು ಯುವಕರು ಸ್ಥಳದಲ್ಲೇ ಸಾವು
- ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು
ಚಿತ್ರದುರ್ಗ (Chitradurga): ಲಾರಿಗೆ (Lorry) ಕಾರು (Car) ಡಿಕ್ಕಿಯಾದ ಭೀಕರ ಅಪಘಾತದಲ್ಲಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ವೇಳೆ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕುಷ್ಟಗಿ ಮೂಲದ ಶಶಿಧರ್ (22) ಮತ್ತು ಮಂಜುನಾಥ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್ (21) ಅವರನ್ನು ಹಿರಿಯೂರು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕೆರೆಯಲ್ಲಿ ಮುಳುಗಿ ಈಜಲು ತೆರಳಿದ್ದ ಮೂವರು ಮಕ್ಕಳು ಸಾವು! ಪೋಷಕರ ಆಕ್ರಂದನ
ಪ್ರಾಥಮಿಕ ಮಾಹಿತಿಯಂತೆ, ಲಾರಿಯ ಟೈರ್ (Tyre Burst) ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿ ಏಕಾಏಕಿ ಎಡಭಾಗಕ್ಕೆ ತಿರುಗಿದೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಇಬ್ಬರನ್ನು ಕೂಡಲೇ ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Police Case) ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



