ಕಾರು-ಲಾರಿ ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಬಳಿ ಕಾರು-ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗుంటೂರಿನಿಂದ ಬರುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

  • ಇನೊವಾ ಮತ್ತು ಲಾರಿಗೆ ಭೀಕರ ಡಿಕ್ಕಿ
  • ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಅಪಘಾತ
  • ಗుంటೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು ಕಾರು

ಚಿತ್ರದುರ್ಗದಿಂದ (Chitradurga district) ಹೊಳಲ್ಕೆರೆ ಕಡೆಗೆ ಸಾಗುತ್ತಿದ್ದ ಇನೊವಾ ಕಾರಿಗೆ, ವಿರುಧ್ದ ದಿಕ್ಕಿನಲ್ಲಿ ಬರುತ್ತಿದ್ದ ಲಾರಿ ಹೊಳಲ್ಕೆರೆ ಬಳಿಯ ಕಣಿವೆಯ ಬಳಿ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪ್ರಮಾಣ ಭಯಾನಕವಾಗಿತ್ತು, ಕಾರು (Innova car) ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ಮೃತರಾಗಿದ್ದಾರೆ.

ಮೃತಪಟ್ಟವರನ್ನು ಸುನೀತಾ (34), ಶ್ಯಾಂ ಬಾಬು (17) ಮತ್ತು ಶಿವನಾಗಲಿ (55) ಎಂದು ಗುರುತಿಸಲಾಗಿದೆ. ಅವರು ಆಂಧ್ರಪ್ರದೇಶದ ಗುಂಟೂರಿನ ವೆಂಕಟಪುರಂ ಮೂಲದವರು.

ಈ ಭಯಾನಕ (tragic accident) ಘಟನೆಯಾಗಿದ್ದು, ಶಿವಮೊಗ್ಗಕ್ಕೆ (Shivamogga) ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಸ್ಥಳೀಯರು ಶಾಕ್ ಆಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹೊಳಲ್ಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

ಈ ಡಿಕ್ಕಿಯ ರಭಸಕ್ಕೆ ಕಾರಿನ ಮುಂದೆ ಮತ್ತು ಬದಿಯ ಭಾಗಗಳು ಪೂರ್ತಿಯಾಗಿ ನಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗದಿದ್ದರೂ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವುದು ದುಃಖಕರ ಸಂಗತಿ.

3 Killed in Horrific Car-Lorry Collision Near Holalkere

English Summary

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories