ವಸತಿ ಇಲ್ಲದವರಿಗೆ ಕೈಗೆಟಕುವ ದರದಲ್ಲಿ ಮನೆ; ಕರ್ನಾಟಕ ಸಿಎಂ ಕೊಟ್ರು ಬಂಪರ್ ಗುಡ್ ನ್ಯೂಸ್

ವಸತಿ ಇಲ್ಲದವರಿಗೆ ಕೈಗೆಟಕುವ ದರದಲ್ಲಿ ಮನೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಯೋಜನೆ ರೂಪಿಸಿದ್ದು, 6ರಿಂದ 6.5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ.

  • 6.5 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ
  • ವಸತಿ ರಹಿತರಿಗೆ ಕೈಗೆಟಕುವ ದರದಲ್ಲಿ ಮನೆ
  • ಕಾರ್ಮಿಕರಿಗೆ 50 ಸಾವಿರದವರೆಗೆ ವಿಶೇಷ ವಸತಿ

ಬೆಂಗಳೂರಿನಲ್ಲಿ (Bengaluru) ವಸತಿ ಸೌಲಭ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ವಸತಿ ರಹಿತರಿಗೆ (Housing) ಕೈಗೆಟಕುವ ದರದಲ್ಲಿ ಮನೆಗಳನ್ನು ಒದಗಿಸುವ ಗುರಿಯೊಂದಿಗೆ 6ರಿಂದ 6.5 ಲಕ್ಷ ಮನೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ (Chief Minister) ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.

ಇದನ್ನೂ ಓದಿ: ರೈತರೇ, ಈ ಗುರುತಿನ ಚೀಟಿ ಇಲ್ಲದಿದ್ರೆ ಪಿಎಂ ಕಿಸಾನ್ ಸೇರಿದಂತೆ ಸಿಗಲ್ಲ ಸರ್ಕಾರಿ ಯೋಜನೆಗಳ ಲಾಭ

ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಬೆಂಗಳೂರು ಮಹಾನಗರ ಪ್ರದೇಶದ ಆರ್ಥಿಕ ಅಭಿವೃದ್ಧಿ ಕುರಿತ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಪ್ರತಿಯೊಬ್ಬರಿಗೂ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಬದ್ಧತೆ ಎಂದು ಹೇಳಿದ್ದಾರೆ.

Free Housing Scheme

ಈ ಯೋಜನೆಯಲ್ಲಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೂ ವಿಶೇಷ ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಸುಮಾರು 40ರಿಂದ 50 ಸಾವಿರ ಕೈಗಾರಿಕಾ ಕಾರ್ಮಿಕರಿಗೆ (Industrial Workers) ಪ್ರತ್ಯೇಕವಾಗಿ ವಸತಿ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರೈತರಿಗೆ ಸಿಹಿಸುದ್ದಿ! ನೇಗಿಲ ಯೋಗಿ ಯೋಜನೆಯಡಿ ಆ್ಯಪ್ ಸೇವೆ, ಹಲವು ಕೃಷಿ ಸೌಲಭ್ಯ

ಬೆಂಗಳೂರು ಮಹಾನಗರ ಪ್ರದೇಶದ ಬೆಳವಣಿಗೆಗೆ ಅನುಗುಣವಾಗಿ ವಸತಿ ಅಗತ್ಯವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ವಸತಿ ರಹಿತರ ಸಮಸ್ಯೆ ಕಡಿಮೆ ಮಾಡುವ ಜೊತೆಗೆ ಕಾರ್ಮಿಕರಿಗೆ ಸುರಕ್ಷಿತ ಮತ್ತು ಕೈಗೆಟಕುವ ಮನೆಗಳನ್ನು ಒದಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories