ಹುಬ್ಬಳ್ಳಿ: ನೀರು ತೆಗೆಯಲು ತೆರೆದಿದ್ದ ಸಂಪಿಗೆ ಬಿದ್ದು 6 ವರ್ಷದ ಬಾಲಕ ಸಾವು

ಹುಬ್ಬಳ್ಳಿಯಲ್ಲಿ ನೀರು ತೆಗೆಯಲು ತೆರೆದಿದ್ದ ಸಂಪಿಗೆ ಆಕಸ್ಮಿಕವಾಗಿ ಬಿದ್ದು ಆರು ವರ್ಷದ ಬಾಲಕ ಮೃತಪಟ್ಟಿದ್ದು, ಕುಟುಂಬದಲ್ಲಿ ದುಃಖ ಮಡುಗಟ್ಟಿದೆ, ಘಟನೆಗೆ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಹುಬ್ಬಳ್ಳಿಯಲ್ಲಿ ಆರು ವರ್ಷದ ಬಾಲಕ ಸಾವು
  • ನೀರಿನ ಸಂಪಿನಲ್ಲಿ ಬಿದ್ದು ಸಿದ್ಧಾರ್ಥ್ ದುರ್ಮರಣ
  • ಕಿಮ್ಸ್ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ

ಹುಬ್ಬಳ್ಳಿಯ (Hubballi) ಉಣಕಲ್ ಗ್ರಾಮದ ಗಣೇಶ್ ಕಾಲೋನಿಯಲ್ಲಿ ಬೆಳಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ ಆರು ವರ್ಷದ ಬಾಲಕ ಸಿದ್ಧಾರ್ಥ್ ಮೃತಪಟ್ಟಿದ್ದಾನೆ. ಮೊದಲ ತರಗತಿಯಲ್ಲಿ ಓದುತ್ತಿದ್ದ ಬಾಲಕ ನೀರು ತೆಗೆಯಲು ತೆರೆದಿದ್ದ ಸಂಪಿನ (Sump) ಬಳಿ ಆಕಸ್ಮಿಕವಾಗಿ ಆಯತಪ್ಪಿ ಒಳಗೆ ಬಿದ್ದಿದ್ದಾನೆ.

ಘಟನೆ ಗಮನಕ್ಕೆ ಬರುತ್ತಿದ್ದಂತೆ ಬಾಲಕನ ತಂದೆ ನಾಗಪ್ಪ ಕೂಡಲೇ ರಕ್ಷಣೆಗೆ ಮುಂದಾಗಿದ್ದಾರೆ. ಬಳಿಕ ಸಿದ್ಧಾರ್ಥ್‌ನನ್ನು ಚಿಕಿತ್ಸೆಗಾಗಿ ಕಿಮ್ಸ್ (KIMS Hospital) ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಸ್ನೇಹಿತರ ಜೊತೆ ನದಿಗೆ ಈಜಲು ಇಳಿದ 15 ವರ್ಷದ ಬಾಲಕ ದುರಂತ ಸಾವು

ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕನ ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಧಾವಿಸಿದ್ದಾರೆ.

ಇನ್ನು ಮರಣೋತ್ತರ ಪರೀಕ್ಷೆ ವಿಳಂಬವಾಗಿರುವುದಕ್ಕೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆಯಿಂದ ಕಾಯುತ್ತಿದ್ದರೂ ಪರೀಕ್ಷೆ ನಡೆಸಿಲ್ಲ, ವೈದ್ಯರು ಲಭ್ಯವಿಲ್ಲ ಎಂದು ಆರೋಪಿಸಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶವಾಗಾರದ ಎದುರು ಕುಟುಂಬಸ್ಥರ ದುಃಖದ ಆಕ್ರಂದನ ಮುಗಿಲುಮುಟ್ಟಿತ್ತು.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories