Kalaburagi Bus Accident: ಕಲಬುರಗಿ ಖಾಸಗಿ ಬಸ್ ಭೀಕರ ಅಪಘಾತ, ಎಂಟಕ್ಕೂ ಹೆಚ್ಚು ಜನ ಸಜೀವ ದಹನ
Kalaburagi Bus Accident: ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ
Kalaburagi Bus Accident: ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಮಲಾಪುರದಲ್ಲಿ ವೇಗವಾಗಿ ಬಂದ ಖಾಸಗಿ ಬಸ್ ಜೀಪಿಗೆ ಡಿಕ್ಕಿ ಹೊಡೆದಿದೆ. ಬಸ್‌ಗೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡಿತು. ಅಪಘಾತದಲ್ಲಿ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್ ಗೋವಾದಿಂದ ಹೈದರಾಬಾದ್‌ಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಕಮಲಾಪುರ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗೋವಾದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತದಲ್ಲಿ 12 ಜನರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಯಿತು. ಪರಿಣಾಮ ಬಸ್‌ನಲ್ಲಿ 35 ಮಂದಿ ಪ್ರಯಾಣಿಸುತ್ತಿದ್ದು, 12 ಮಂದಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕ ಸೇರಿ ಬಸ್ ನಲ್ಲಿ ಸುಮಾರು 35 ಜನರಿದ್ದರು ಎನ್ನಲಾಗಿದೆ. 12 ಜನರನ್ನು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
7 Passengers Dies In Kalaburagi Bus Accident
The accident occurred on the outskirts of Kamalapur in the Kalaburagi district
Follow us On
Google News |