ಲಗೇಜ್ ಆಟೋ ಡಿಕ್ಕಿ: ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕನಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಆನಂದಪುರದಲ್ಲಿ ನಡೆದಿದೆ.

ಶಿವಮೊಗ್ಗ (Shivamogga) ಜಿಲ್ಲೆಯ ಆನಂದಪುರದಲ್ಲಿ ನಡೆದ ಈ ಅಪಘಾತದಲ್ಲಿ ಪ್ರಶಾಂತ್ ಕೃಷ್ಣಮೂರ್ತಿ ಅವರ ಪುತ್ರ ತನ್ಮಯ್ (8) ಮೃತಪಟ್ಟ ಬಾಲಕ. ಸೆಪ್ಟೆಂಬರ್ 27ರಂದು ಸಂಜೆ ಗೌತಮಪುರ ಕಡೆಯಿಂದ ಆನಂದಪುರದತ್ತ ಲಗೇಜ್ ಆಟೋ (Luggage Auto) ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಆನಂದಪುರ–ಶಿಕಾರಿಪುರ ರಸ್ತೆಯ ದಾಸಕೊಪ್ಪ ಗ್ರಾಮದ ಅಂಗಡಿ ಸಮೀಪ ತನ್ಮಯ್ ರಸ್ತೆ ಬದಿಯಲ್ಲಿ ನಿಂತಿದ್ದಾಗ ಆಟೋದ ಗ್ರಿಲ್ (Auto Grill) ಬಾಲಕನಿಗೆ ತಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕನ ಬಲ ಹಣೆ ಹಾಗೂ ಬಲಗೈಗೆ ಗಂಭೀರ ಗಾಯಗಳಾಗಿದ್ದು, ಹಣೆ ಭಾಗದಲ್ಲಿ ತೆರೆದ ಗಾಯವಾಗಿ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿತ್ತು.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಮುಂದಿನ 10 ದಿನ ಭಾರೀ ಮಳೆ ಮುನ್ಸೂಚನೆ! ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ

ಅಪಘಾತದ ಬಳಿಕ ತಕ್ಷಣ ಬಾಲಕನನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.

ಗಂಭೀರ ಗಾಯಗಳಿಂದ ಬಳಲುತ್ತಿದ್ದ ತನ್ಮಯ್ ಚಿಕಿತ್ಸೆ ಪಡೆಯುತ್ತಿದ್ದರೂ ಚೇತರಿಸಿಕೊಳ್ಳಲಿಲ್ಲ. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಗೇರ್ಬೀಸ್ ಸಮೀಪದ ತೋಳಿಕಲ್ಲಿನ ಸಂತೋಷ್ ಕೊಲ್ಲಪ್ಪ ಎಂಬವರು ಲಗೇಜ್ ಆಟೋ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ (Anandapura Police Station) ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories