ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಇಲ್ಲಿದೆ ಸರ್ಕಾರದ ಅಪ್ಡೇಟ್

ಸರ್ಕಾರವು ಅನ್ನಭಾಗ್ಯ ಯೋಜನೆ (AnnaBhagya scheme) ಅಡಿಯಲ್ಲಿ ನೀಡುವ ಹಣವು ಬೇರೆ ಬೇರೆ ಕಾರ್ಯಗಳಿಗೆ ಬಳಕೆಯಾಗುತ್ತಿದ್ದು, ಅಕ್ಕಿ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ

Bengaluru, Karnataka, India
Edited By: Satish Raj Goravigere

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜನರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಕಾಂಗ್ರೆಸ್ ಪಕ್ಷವು (Congress government) ಚುನಾವಣಾ ಪೂರ್ವದಲ್ಲಿ ತಿಳಿಸಿದಂತೆ ಚುನಾವಣೆ (election) ನಂತರ ಗೆದ್ದು ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿ (5 guarantee schemes) ಗಳಲ್ಲಿ ನಾಲ್ಕು ಗ್ಯಾರಂಟಿಯನ್ನು ಜಾರಿಗೆ ತಂದಿತ್ತು.

Annabhagya Yojana Fund has been deposited, check your DBT status

ಈ ರೀತಿ ಜಾರಿಗೆ ತಂದ ಗ್ಯಾರಂಟಿಗಳಲ್ಲಿ ಅನ್ನಭಾಗ್ಯವೂ ಒಂದಾಗಿದೆ. ಅನ್ನಭಾಗ್ಯ ಘೋಷಣೆ ಮಾಡುವ ಮುನ್ನ ಕೇಂದ್ರ ಸರ್ಕಾರ ಹೆಚ್ಚಿನ ಅಕ್ಕಿ ಪೂರೈಸಲಿದೆ ಎಂದು ಭಾವಿಸಿತ್ತು. ಆದರೆ ಕೇಂದ್ರ ಸರ್ಕಾರ (central government) ಅಕ್ಕಿ ಪೂರೈಸಲು ಸಾಧ್ಯವಿಲ್ಲ ಎಂದು ತಿಳಿಸಿದ ನಂತರ ರಾಜ್ಯ ಸರ್ಕಾರವು ದೇಶದ ವಿವಿಧ ರಾಜ್ಯ ಸರ್ಕಾರಗಳ ಜೊತೆ ಮಾತುಕತೆ ನಡೆಸಿತು.

ರೇಷನ್ ಕಾರ್ಡ್ ಸಂಖ್ಯೆ ಹಾಕಿ ಗೃಹಲಕ್ಷ್ಮಿ ಯೋಜನೆ ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಆದರೆ ರಾಜ್ಯ ಸರ್ಕಾರಕ್ಕೆ ಅಕ್ಕಿ ಮಾತ್ರ ಸಿಗಲಿಲ್ಲ. ನಂತರ ರಾಜ್ಯ ಸರ್ಕಾರ 5 ಕೆ.ಜಿ. ಅಕ್ಕಿಯ ಬದಲು ಹಣವನ್ನು ನೀಡುವ ತೀರ್ಮಾನಕ್ಕೆ ಬಂದಿತು. ಅದರಂತೆ ಪ್ರತಿ ತಿಂಗಳು 5 ಕೆ.ಜಿ. ಅಕ್ಕಿಯ ಬದಲು 170 ರೂ. ಹಣವನ್ನು ಪಡಿತರ ಚೀಟಿದಾರರ ಖಾತೆಗೆ (Bank Account) ವರ್ಗಾವಣೆ ಮಾಡಲಾಗುತ್ತಿದೆ.

ಆದರೆ ಇದೀಗ ಈ ವಿಚಾರಕ್ಕೆ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದು, ಅಕ್ಕಿಯನ್ನೇ ನೀಡುವಂತೆ ರಾಜ್ಯ ಸರ್ಕಾರ (state government) ವನ್ನು ಆಗ್ರಹಿಸಿದ್ದಾರೆ.

ಹಣ ಬೇಡ ಅಕ್ಕಿ ಕೊಡಿ!

ರಾಜ್ಯ ಸರ್ಕಾರವು ಅಕ್ಕಿಯ ಬದಲು ಹಣ ನೀಡುವುದರಿಂದ ನಮಗೆ ಯಾವುದೇ ರೀತಿಯ ಉಪಯೋಗ ಆಗುತ್ತಿಲ್ಲ. ಆ ಹಣವನ್ನು ಬೇರೆ ಕಾರ್ಯಗಳಿಗೆ ವಿನಿಯೋಗಿಸುತ್ತಾರೆ. ಆದ್ದರಿಂದ ಹಣದ ಬದಲು ಅಕ್ಕಿಯನ್ನೇ ನೀಡುವಂತೆ ಮಹಿಳೆಯರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವುದರಿಂದ ಅಕ್ಕಿ ಉತ್ಪಾದನೆಯೂ ಕುಂಠಿತವಾಗಿದೆ. ಇದರಿಂದ ಅಕ್ಕಿಯ ದರವೂ ಏರಿಕೆ ಆಗಿದೆ. ಹಾಗಾಗಿ ಅಕ್ಕಿಗೆ ಹೆಚ್ಚಿನ ಡಿಮಾಂಡ್ ಬಂದಿದೆ.

ಗೃಹಲಕ್ಷ್ಮಿ ಯೋಜನೆ ಅರ್ಜಿ ಮತ್ತೆ ಪರಿಶೀಲನೆ, ಹೊಸ ಅರ್ಜಿ ಸಲ್ಲಿಕೆಗೂ ಅವಕಾಶ

Annabhagya Schemeಸರ್ವೇ ನಡೆಸಿದ ರಾಜ್ಯ ಸರ್ಕಾರ: (state government survey)

ಹೆಚ್ಚಿನ ಮಹಿಳೆಯರು ಹಣದ ಬದಲು ಅಕ್ಕಿಯನ್ನೇ ನೀಡಿ ಎಂದು ಆಗ್ರಹಿಸಿದ ನಂತರ ರಾಜ್ಯ ಸರ್ಕಾರವು ಎನ್ಜಿಒ (NGO) ಒಂದರ ಮೂಲಕ ರಾಜ್ಯಾದ್ಯಂತ ಸರ್ವೇ (survey) ನಡೆಸಿದೆ. ಈ ಸರ್ವೇಯಲ್ಲಿ ಶೇ.60ಕ್ಕೂ ಅಧಿಕ ಮಹಿಳೆಯರು ಹಣದ ಬದಲು ಅಕ್ಕಿ ನೀಡುವುದು ಉತ್ತಮ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ! ಇವರಿಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣವೂ ಸಿಗೋಲ್ಲ

ಅಕ್ಕಿ ನೀಡುವ ಕುರಿತು ರಾಜ್ಯ ಸರ್ಕಾರದ ಚಿಂತನೆ:

ಸರ್ಕಾರವು ಅನ್ನಭಾಗ್ಯ ಯೋಜನೆ (AnnaBhagya scheme) ಅಡಿಯಲ್ಲಿ ನೀಡುವ ಹಣವು ಬೇರೆ ಬೇರೆ ಕಾರ್ಯಗಳಿಗೆ ಬಳಕೆಯಾಗುತ್ತಿದ್ದು, ಅಕ್ಕಿ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ರಾಜ್ಯದ ಶೇ.70ಕ್ಕೂ ಅಧಿಕ ಜನರು ಅಕ್ಕಿಯನ್ನೇ ನೀಡಿ ಎಂದು ಕೇಳುತ್ತಿದ್ದಾರೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಅವರೇ ತಿಳಿಸಿದ್ದಾರೆ.

ಸಚಿವರು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅಕ್ಕಿ ನೀಡಬೇಕು ಎನ್ನುವ ವಿಚಾರ ರಾಜ್ಯ ಸರ್ಕಾರಕ್ಕೂ ಇದೆ. ಈ ಕುರಿತು ಆಂಧ್ರಪ್ರದೇಶ, ತೆಲಂಗಾಣ ಸರ್ಕಾರಗಳ ನಡುವೆ ಮಾತುಕತೆ ನಡೆಸಲಾಗಿದೆ. ಆದರೆ ದರ ಹೊಂದಾಣಿಕೆ ಆಗುತ್ತಿಲ್ಲ. ಆದಷ್ಟು ಶೀಘ್ರ ಅಕ್ಕಿ ಕೊಡಲು ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ರೇಷನ್ ಕಾರ್ಡ್ ನಲ್ಲಿ ಮಕ್ಕಳ ಹೆಸರು ಸೇರಿಸಲು ಅವಕಾಶ, ಆನ್ಲೈನ್ ನಲ್ಲೇ ಅಪ್ಡೇಟ್ ಮಾಡಿಕೊಳ್ಳಿ

A big changes in Annabhagya Yojana, Here is the update from the government