ಗೃಹಲಕ್ಷ್ಮಿ ಯೋಜನೆ ಬಿಟ್ಟು ₹30,000 ಸಿಗುವ ಹೊಸ ಯೋಜನೆಗೆ ಮುಗಿಬಿದ್ದ ಮಹಿಳೆಯರು!
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರ ಒಂದಲ್ಲ ಒಂದು ಬಂಪರ್ ಯೋಜನೆಗಳನ್ನು ಜಾರಿಗೆ ತಂದಿದೆ, ಈ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ (economic empowerment) ಸರ್ಕಾರ ಸಹಾಯ ಮಾಡುತ್ತಿದೆ.
ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಅಡಿಯಲ್ಲಿ ಪ್ರತಿ ತಿಂಗಳು 2000 ಗಳಂತೆ ವರ್ಷಕ್ಕೆ 24,000ಗಳನ್ನು ಮಹಿಳೆಯರು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಇದರಿಂದ ಸಾಕಷ್ಟು ಗೃಹಿಣಿಯರ ಮನೆ ನಿರ್ವಹಣೆಗೆ ಸಹಾಯಕವಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಖುಷಿ ವಿಚಾರವನ್ನು ಮಹಿಳೆಯರಿಗೆ ಸರ್ಕಾರ ನೀಡಿದೆ. ಹೊಸದೊಂದು ಯೋಜನೆ ಜಾರಿಗೆ ಬಂದಿದ್ದು ಈ ಯೋಜನೆಯ ಅಡಿಯಲ್ಲಿ ಮಹಿಳೆಯರು 30,000 ಗಳನ್ನ ಪಡೆದುಕೊಳ್ಳಬಹುದು.
ಸ್ವಂತ ಜಮೀನು ಹೊಂದಿರುವ ರೈತರಿಗೆ ಸಿಹಿ ಸುದ್ದಿ! ಸಿಗಲಿದೆ ಡಿಜಿಟಲ್ ಜಮೀನು ಪತ್ರ
ಧನಶ್ರೀ ಯೋಜನೆ (Dhanashree scheme)
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ (Karnataka state women’s development corporation) ಮಹಿಳೆಯರಿಗಾಗಿಯೇ ಈ ವಿಶೇಷ ಯೋಜನೆಯನ್ನು ಪರಿಚಯಿಸಿದೆ.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಧನಶ್ರೀ ಯೋಜನೆಯನ್ನು ಆರಂಭಿಸಲಾಗಿದ್ದು ಮಹಿಳೆಯರು ಈ ಯೋಜನೆಯ ಮೂಲಕ ಆರ್ಥಿಕ ಸಹಾಯ (Business Loan Scheme) ಪಡೆದುಕೊಂಡು ತಮ್ಮದೇ ಆಗಿರುವ ಸ್ವಂತ ಉದ್ಯಮ (own business) ಆರಂಭಿಸಬಹುದು.
ಸಣ್ಣದಾಗಿರುವ ಉದ್ಯಮ ಆರಂಭಿಸುವುದರ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎನ್ನುವ ಕಾರಣಕ್ಕೆ ಧನಶ್ರೀ ಯೋಜನೆಯನ್ನು ಸರಕಾರ ಜಾರಿಗೆ ತಂದಿದೆ ಎನ್ನಬಹುದು.
ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆಗೆ ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ!
Dhanashree ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?
18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು ಆರ್ಥಿಕ ಸಹಾಯ ಪಡೆದುಕೊಳ್ಳಲು ಧನಶ್ರೀ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರು ಹಾಗೂ ದೇವದಾಸಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಫಲಾನುಭವಿ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಅದರ ಬದಲು ನೀವು ಹತ್ತಿರದ ಗ್ರಾಮ ಒನ್ ಬಾಪೂಜಿ ಕೇಂದ್ರ ಮೊದಲಾದ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಹಣ ಕೊನೆಗೂ ಸಿಗದೇ ಇದ್ರೆ, ನಿಮ್ಮ ಗಂಡನ ಖಾತೆಗೆ ಬರುವಂತೆ ಮಾಡಿಕೊಳ್ಳಿ!
ಉದ್ಯೋಗಿನಿ ಯೋಜನೆಯ ಮೂಲಕವೂ ಸಾಲ (Udyogini Yojana Loan)
ಧನಶ್ರೀ ಯೋಜನೆ ಮಾತ್ರವಲ್ಲದೆ ರಾಜ್ಯದಲ್ಲಿ ವಾಸಿಸುವ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯ ಮೂಲಕವೂ ಕೂಡ ರಾಜ್ಯ ಸರ್ಕಾರ ಸಾಲ ಸೌಲಭ್ಯ (Loan) ಒದಗಿಸುತ್ತಿದೆ. ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಮಹಿಳೆಯರು ಮಾತ್ರವಲ್ಲದೇ ಸಾಮಾನ್ಯ ಮಹಿಳೆಯರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಮುಖ್ಯವಾಗಿ 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರಿಗೆ ಸರ್ಕಾರ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸಬ್ಸಿಡಿ ಸಾಲ (subsidy loan) ನೀಡುತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೂರು ಲಕ್ಷದವರೆಗೆ ಸಾಲ ಸೌಲಭ್ಯ (Loan Facility) ನೀಡಲಾಗುತ್ತಿದ್ದು 50% ನಷ್ಟು ಸಬ್ಸಿಡಿ ಸರ್ಕಾರವೇ ಒದಗಿಸುತ್ತದೆ.
20,000 ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಗ್ರೀನ್ ಸಿಗ್ನಲ್; ನಿಮ್ಮ ಹೆಸರು ಇದೆಯಾ ನೋಡಿಕೊಳ್ಳಿ
ಅದೇ ರೀತಿ ಸಾಮಾನ್ಯ ಮಹಿಳೆಯರೂ ಕೂಡ ಮೂರು ಲಕ್ಷ ರೂಪಾಯಿಗಳ ವರೆಗೆ ಆರ್ಥಿಕ ನೆರವು ಪಡೆದುಕೊಳ್ಳಬಹುದು, ಇದಕ್ಕೆ 30% ನಷ್ಟು ಸಬ್ಸಿಡಿ ಸರ್ಕಾರ ಒದಗಿಸುತ್ತದೆ. ಒಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮಹಿಳೆಯರು ಕೂಡ ಆರ್ಥಿಕವಾಗಿ ಸ್ವಾವಲಂಬನೆಯ ಜೀವನ ನಡೆಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಇತ್ತೀಚೆಗೆ ಕೆಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗಾಗಿ ಫಲಾನುಭವಿ ಅರ್ಹ ಮಹಿಳೆಯರು ಈ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು.
After the Gruha Lakshmi Yojana, Women are applying new scheme that will get 30,000