Kolar: ಅನಾರೋಗ್ಯದಿಂದ ಮನನೊಂದು ಕೋಲಾರ ಆಟೋ ಚಾಲಕ ಆತ್ಮಹತ್ಯೆ

ದೀರ್ಘಕಾಲದ ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದ ಮಾನಸಿಕವಾಗಿ ಕುಗ್ಗಿದ್ದ ಕೋಲಾರದ ಆಟೋ ಚಾಲಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  • ಆಟೋ ಚಾಲಕ ಆತ್ಮಹತ್ಯೆ
  • ಅನಾರೋಗ್ಯ ಮತ್ತು ಖಿನ್ನತೆ
  • ಕೋಲಾರ ನಗರ ಠಾಣಾ ಪ್ರಕರಣ

ಕೋಲಾರ (Kolar): ಕೋಲಾರ ನಗರದ ಜಯನಗರ ಬಡಾವಣೆಯ ನಿವಾಸಿ ಚಂದ್ರಶೇಖರ್ (45) ಎಂಬ ಆಟೋ ಚಾಲಕ ಅನಾರೋಗ್ಯದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಚಂದ್ರಶೇಖರ್, ಚಿಕಿತ್ಸೆಗಾಗಿ ಅಗತ್ಯವಿದ್ದ ಹಣಕಾಸು ಕೊರತೆಯನ್ನೂ ಎದುರಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಇತ್ತೀಚಿನ ದಿನಗಳಲ್ಲಿ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

TRENDING ARTICLES1 / 3
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories