Anna Seva App: ರೇಷನ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ಅನ್ನಸೇವೆ ಆ್ಯಪ್ ಇಂದಿನಿಂದ ರಾಜ್ಯಾದ್ಯಂತ ಲಭ್ಯ

Anna Seva App: ಅನ್ನಭಾಗ್ಯ ಸೇರಿದಂತೆ ಪಡಿತರ ಯೋಜನೆಗಳ ಫಲಾನುಭವಿಗಳು ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಅನ್ನಸೇವೆ ಆ್ಯಪ್ ಇಂದಿನಿಂದ ರಾಜ್ಯಾದ್ಯಂತ ಲಭ್ಯವಾಗಲಿದ್ದು, ಅಕ್ಟೋಬರ್ 20ರೊಳಗೆ ಪ್ರಕ್ರಿಯೆ ಮುಗಿಸಬೇಕು.

ಬೆಂಗಳೂರು (Bengaluru): ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಪಡೆಯುತ್ತಿರುವವರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಮನೆಯಲ್ಲೇ ಕುಳಿತು ಇ-ಕೆವೈಸಿ ಪೂರ್ಣಗೊಳಿಸಲು ಅನುಕೂಲವಾಗುವ ‘ಅನ್ನಸೇವೆ’ ಮೊಬೈಲ್ ಆ್ಯಪ್ (Anna Seva App) ಇಂದಿನಿಂದ (ಅಕ್ಟೋಬರ್ 14) ರಾಜ್ಯಾದ್ಯಂತ ಲಭ್ಯವಾಗಲಿದೆ. ಈ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಸರತಿ ಸಾಲಿನಲ್ಲಿ ನಿಲ್ಲುವ ತೊಂದರೆ ತಪ್ಪಲಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಅಕ್ಟೋಬರ್ 1ರಂದು ಈ ಆ್ಯಪ್ ಬಿಡುಗಡೆ ಮಾಡಿದ್ದರು. ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಮತ್ತು ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ. ಆರಂಭದಲ್ಲಿ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಬಳಕೆಗೆ ಅವಕಾಶ ನೀಡಲಾಗಿತ್ತು. ಇದೀಗ ರಾಜ್ಯದ ಎಲ್ಲಾ ಜಿಲ್ಲೆಗಳ ಫಲಾನುಭವಿಗಳು ಆ್ಯಪ್ ಬಳಸಬಹುದು.

ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರು ಮಿಸ್ ಮಾಡಬೇಡಿ, ಅ.20ರೊಳಗೆ ಈ ಕೆಲಸ ಕಡ್ಡಾಯ! ಕೆಲವೇ ದಿನ ಬಾಕಿ

ಮೊಬೈಲ್‌ನಲ್ಲೇ ಇ-ಕೆವೈಸಿ ಮಾಡುವುದು ಹೇಗೆ?

ಫಲಾನುಭವಿಗಳು ಗೂಗಲ್ ಪ್ಲೇ ಸ್ಟೋರ್‌ನಿಂದ (Google Play Store) ‘ಅನ್ನಸೇವೆ’ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ UIDAI ಫೇಸ್ ಅಥೆಂಟಿಕೇಶನ್ (Face Authentication) ಸೌಲಭ್ಯವನ್ನು ಬಳಸಿಕೊಂಡು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಇದರಿಂದ ಕೆಲಸದ ನಿಮಿತ್ತ ಬೇರೆ ಊರುಗಳಿಗೆ ವಲಸೆ ಹೋಗಿರುವ ಕಾರ್ಮಿಕರು ತಮ್ಮ ಸ್ವಗ್ರಾಮಕ್ಕೆ ಬಂದು ಪಡಿತರ ಅಂಗಡಿಗಳ ಮುಂದೆ ಕಾಯುವ ಅಗತ್ಯ ಕಡಿಮೆಯಾಗಲಿದೆ.

ಇದನ್ನೂ ಓದಿ: ಬೆಂಗಳೂರು ಹೆಬ್ಬಾಳ ಸುರಂಗ ರಸ್ತೆಗೆ ಬ್ರೇಕ್, ಯೋಜನೆಗೆ ಹಣಕಾಸು ಇಲಾಖೆಯ ಆಕ್ಷೇಪ

ಈಗಾಗಲೇ ಎಷ್ಟು ಮಂದಿ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ?

ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಅಕ್ಟೋಬರ್ 1ರಿಂದ 12ರವರೆಗೆ ಪ್ರಾಯೋಗಿಕವಾಗಿ ಆ್ಯಪ್ ಬಳಕೆಗೆ ಅವಕಾಶ ನೀಡಿದ್ದ ಎಂಟು ಜಿಲ್ಲೆಗಳಲ್ಲಿ 1,60,267 ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ.

ರಾಜ್ಯದಲ್ಲಿ ಇ-ಕೆವೈಸಿ ಮಾಡಿಸಬೇಕಿರುವ 2.67 ಕೋಟಿಗೂ ಅಧಿಕ ಫಲಾನುಭವಿಗಳ ಪೈಕಿ 2,06,76,278 ಮಂದಿ ಈಗಾಗಲೇ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಸಿಹಿಸುದ್ದಿ: ಭೂರಹಿತ ಕರ್ನಾಟಕ ಗ್ರಾಮೀಣ ಕೃಷಿಕರಿಗೆ ಹಸು, ಕುರಿ, ಕೋಳಿ ಸಾಕಾಣಿಕೆಗೆ ಸರ್ಕಾರದಿಂದ ನೆರವು

ಅಕ್ಟೋಬರ್ 20 ಕೊನೆಯ ದಿನ

ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ. ಇನ್ನೂ ಪ್ರಕ್ರಿಯೆ ಮುಗಿಸದಿರುವ ಫಲಾನುಭವಿಗಳು ಗಡುವಿನೊಳಗೆ ಇದನ್ನು ಪೂರ್ಣಗೊಳಿಸಬೇಕು ಎಂದು ಸಚಿವ ರಿಜ್ವಾನ್ ಅರ್ಷದ್ ಮನವಿ ಮಾಡಿದ್ದಾರೆ.

ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿರುವ ಫಲಾನುಭವಿಗಳೂ ಮತ್ತೊಮ್ಮೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಇಲಾಖೆ ಸೂಚಿಸಿದೆ. ಹೀಗಾಗಿ, ರೇಷನ್ ಕಾರ್ಡ್ ಹೊಂದಿರುವವರು ತಮ್ಮ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿಕೊಂಡು, ಬಾಕಿ ಇದ್ದರೆ ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸುವುದು ಉತ್ತಮ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 3
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories