ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಇಂತಹವರಿಗೆ ಮಾತ್ರ ಜಮೆ ಆಗಲಿದೆ!
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದೆಯೋ ಇಲ್ಲವೋ ಎನ್ನುವುದನ್ನು ನೀವು DBT status ಚೆಕ್ ಮಾಡಬಹುದು
ಸಾಮಾನ್ಯವಾಗಿ, ಚುನಾವಣೆ (Election) ಮುಗಿದ ನಂತರ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ವಿಚಾರಗಳನ್ನು ಜಾರಿಗೆ ತರುವುದು ಕಡಿಮೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.
ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅನ್ನಭಾಗ್ಯ ಯೋಜನೆಯಲ್ಲಿ (AnnaBhagya Yojana) ಮಾತ್ರ ಅಕ್ಕಿಯನ್ನು ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.
ಗೃಹಜ್ಯೋತಿ ಫ್ರೀ ವಿದ್ಯುತ್! ರಾತ್ರೋರಾತ್ರಿ ಸರ್ಕಾರದ ಮತ್ತೊಂದು ಮಹತ್ವದ ನಿರ್ಧಾರ
ಹೌದು, ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಐದು ಕೆಜಿ ಹೆಚ್ಚುರಿಯಾಗಿ ನೀಡುವುದಾಗಿ ತಿಳಿಸಿತ್ತು. ಆದರೆ ಅಕ್ಕಿ ದಾಸ್ತಾನು ಸಮಸ್ಯೆಯನ್ನು ರಾಜ್ಯ ಸರ್ಕಾರಕ್ಕೆ ಇದುವರೆಗೆ ಪರಿಹರಿಸಲು ಸಾಧ್ಯವಾಗಿಲ್ಲ.
ಹಾಗಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ ಪ್ರತಿಯೊಬ್ಬ ಸದಸ್ಯ ಐದು ಕೆಜಿಗೆ 170ಗಳನ್ನು ಪಡೆದುಕೊಳ್ಳುತ್ತಿದ್ದಾನೆ. ಈ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ (Bank Account) ಜಮಾ ಮಾಡಲಾಗುತ್ತಿದೆ.
ಇಂಥವರಿಗೆ ಹಣ ಬರುವುದಿಲ್ಲ!
ಗೃಹಲಕ್ಷ್ಮಿ ಯೋಜನೆಯ ಹಣ ಹೇಗೆ ಸಾಕಷ್ಟು ಫಲಾನುಭವಿ ಮಹಿಳೆಯರ ಖಾತೆಗೆ ತಲುಪಿಲ್ಲವೂ, ಅದೇ ರೀತಿ ಅನ್ನಭಾಗ್ಯ ಯೋಜನೆಯ ಹಣವು ತಲುಪಿಲ್ಲ. ಇದಕ್ಕೆ ಕೆಲವು ಹೋಲಿಕೆ ಆಗುವ ಕಾರಣಗಳು ಇವೆ. ಯಾಕೆಂದರೆ ಇಂದು ರೇಷನ್ ಕಾರ್ಡ್ (Ration Card) ಮನೆಯ ಯಜಮಾನಿಯ ಹೆಸರಿಗೆ ಪರಿವರ್ತನೆ ಮಾಡಿಕೊಳ್ಳಲಾಗಿದೆ.
ಇಂತಹ ಸಂದರ್ಭದಲ್ಲಿ ಬ್ಯಾಂಕ್ ಖಾತೆ ಪತಿಯ ಹೆಸರಿನಲ್ಲಿ ಇದ್ದು, ರೇಷನ್ ಕಾರ್ಡ್ ಮಾತ್ರ ಪತ್ನಿ ಹೆಸರಿನಲ್ಲಿ ಇದ್ದಾಗ ಒಂದಕ್ಕೊಂದು ಮ್ಯಾಚ್ ಆಗದೆ ಇರುವ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯ ಹಣವಾಗಲಿ ಅಥವಾ ಗೃಹಲಕ್ಷ್ಮಿ ಯೋಜನೆಯ ಹಣವಾಗಲಿ ಖಾತೆಗೆ ಜಮಾ ಆಗುವುದಿಲ್ಲ.
ಗೃಹಲಕ್ಷ್ಮಿ 7ನೇ ಕಂತಿನ ಬಗ್ಗೆ ಬೆಳ್ಳಂಬೆಳಗ್ಗೆ ಬಿಗ್ ಅಪ್ಡೇಟ್! ಇಲ್ಲಿದೆ ಮಹತ್ವದ ಮಾಹಿತಿ
ಇದರ ಜೊತೆಗೆ ಕೆಲವು ತಾಂತ್ರಿಕ ದೋಷಗಳು (technical errors) ಕೂಡ ಡಿಬಿಟಿ ಹಣ ಫಲಾನುಭವಿಗಳ ಖಾತೆಗೆ ಬಾರದೆ ಇರಲು ಕಾರಣವಾಗಿದೆ. ಆದರೆ ಖಾತೆಯಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಇರುವವರು ಪ್ರತಿ ತಿಂಗಳು ಅನ್ನ ಭಾಗ್ಯ ಯೋಜನೆಯ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ.
ನಿಮ್ಮ ಖಾತೆಯನ್ನು ಚೆಕ್ ಮಾಡಿ! (Check your DBT status)
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದೆಯೋ ಇಲ್ಲವೋ ಎನ್ನುವುದನ್ನು ನೀವು DBT status ಚೆಕ್ ಮಾಡಬಹುದು.
ಇದನ್ನು ಚೆಕ್ ಮಾಡುವುದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಕೊಡಲಾಗಿದೆ, ಅದರ ಮೇಲೆ ಕ್ಲಿಕ್ ಮಾಡಿ. (https://ahara.kar.nic.in/). ಅಲ್ಲಿ ಈ ಸ್ಥಿತಿ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಬಳಿಕ ನಿಮ್ಮ ಜಿಲ್ಲೆ ಯಾವುದು ಎನ್ನುವುದನ್ನು ನೋಡಿ ಅದರ ಮೇಲ್ಭಾಗದಲ್ಲಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲೆಗಳು ಕಡ್ಡಾಯ! ಕೂಡಲೇ ಸಿದ್ದಪಡಿಸಿಕೊಳ್ಳಿ
ಈಗ ಡಿ ಬಿ ಟಿ ಸ್ಟೇಟಸ್ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. ಬಳಿಕ ತಿಂಗಳು ವರ್ಷ ಆಯ್ದುಕೊಂಡು, ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿದರೆ ನೀವು ಯಾವ ತಿಂಗಳನ್ನು ಆಯ್ಕೆ ಮಾಡಿದ್ದೀರೋ ಆ ತಿಂಗಳಿನಲ್ಲಿ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ಯೋ ಇಲ್ಲವೋ ಎನ್ನುವ ಮಾಹಿತಿಯನ್ನು ತಿಳಿದುಕೊಳ್ಳಬಹುದು.
Annabhagya Yojana money for the month of March will be deposited only for such people