ಶಕ್ತಿ ಯೋಜನೆ (Shakti scheme), ಗೃಹಲಕ್ಷ್ಮಿ ಯೋಜನೆ (Gruha lakshmi scheme) ಅಥವಾ ಅನ್ನಭಾಗ್ಯ ಯೋಜನೆಗಳು ಮಹಿಳೆಯರ ಸಬಲೀಕರಣ (women empowerment) ಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಾಗಿದ್ದು ಮಹಿಳೆಯರಿಗೆ ಹೆಚ್ಚು ಪ್ರಯೋಜನ ನೀಡಿವೆ.
ಇತ್ತೀಚೆಗೆ ಉದ್ಯೋಗಿನಿ ಯೋಜನೆ (udyogini scheme) ಯನ್ನು ಕೂಡ ಜಾರಿಗೆ ತರಲಾಗಿದ್ದು ಮಹಿಳೆಯರು ತಮ್ಮ ಸ್ವಂತ ಉದ್ಯಮ (Own Business) ಆರಂಭಿಸುವುದಕ್ಕೆ ಒಂದು ರೂಪಾಯಿ ಬಡ್ಡಿಯನ್ನು ಪಾವತಿ ಮಾಡದೆ 3 ಲಕ್ಷಗಳ ವರೆಗೆ ಸಾಲ (Loan) ಸೌಲಭ್ಯ ಪಡೆಯಬಹುದು.
ಯುವನಿಧಿ ಯೋಜನೆ ಹಣ ಪಡೆಯಲು ಈ ದಾಖಲೆ ಕಡ್ಡಾಯ! ಇಲ್ಲಿದೆ ಹೊಸ ರೂಲ್ಸ್
ರಾಜ್ಯ ಸರ್ಕಾರದ ಗೆಳತಿ ಯೋಜನೆ!
ಮಹಿಳೆಯರಿಗಾಗಿಯೇ ರಾಜ್ಯ ಸರ್ಕಾರ ಮತ್ತೊಂದು ಯೋಜನೆಯನ್ನು ಜಾರಿಗೆ ತಂದಿದೆ ಅದುವೇ ಗೆಳತಿ ಯೋಜನೆ! ಅತಿ ಕಡಿಮೆ ಬಡ್ಡಿಗೆ ಸಾಲ (Loan) ಸೌಲಭ್ಯ ಹಾಗೂ ಸಬ್ಸಿಡಿ ದರದಲ್ಲಿ ಸಾಲ (subsidy loan) ನೀಡಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಅನುಕೂಲ ಮಾಡಿಕೊಡುತ್ತಿದೆ.
2017 – 18ರಲ್ಲಿ ರಾಜ್ಯ ಬಜೆಟ್ ನಲ್ಲಿ ಗೆಳತಿ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಆರ್ಥಿಕ ನೆರವು ನೀಡಲು, ಈ ಯೋಜನೆ ಬಗ್ಗೆ ಸರ್ಕಾರ ಚಿಂತಿಸಿತ್ತು.
ಇಂತಹ ಮಹಿಳೆಯರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ (medical treatment) ಹಾಗೂ ಮತ್ತಿತರ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು ಸರ್ಕಾರ ತೀರ್ಮಾನಿಸಿತ್ತು. ರಾಜ್ಯದಲ್ಲಿ ಸುಮಾರು 145 ಕೇಂದ್ರಗಳಲ್ಲಿ ಗೆಳತಿ ವಿಶೇಷ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ ಅನುಮತಿ ನೀಡಿತ್ತು.
ಇಷ್ಟು ದಿನ ಗೃಹಲಕ್ಷ್ಮಿ ಯೋಜನೆ ಹಣ ಪಡೆದವರಿಗೆ ರಾತ್ರೋ-ರಾತ್ರಿ ಹೊಸ ಅಪ್ಡೇಟ್!
ಗೆಳತಿ ಯೋಜನೆಯ ಪ್ರಯೋಜನ!
ಒಂದೇ ಕಟ್ಟಡದಲ್ಲಿ ಅಥವಾ ಒಂದೇ ಸೂರಿನಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಥವಾ ಮಕ್ಕಳು, ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನಿನ ಸಹಾಯ, ಸಮಾಲೋಚನೆ ಮೊದಲಾದವುಗಳ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆ (KC general hospital) ಈ ಹಿಂದೆ ಗೆಳತಿ ಯೋಜನೆಯ ಜೊತೆಗೆ ಕೈಜೋಡಿಸಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಚಿಕಿತ್ಸೆ ನೀಡಲು ಒಪ್ಪಿಗೆ ಸೂಚಿಸಿತ್ತು.
ಈಗ ರಾಜ್ಯ ಸರ್ಕಾರ ಈ ಯೋಜನೆಗೆ ಮತ್ತು ಒಂದಿಷ್ಟು ಅನುದಾನ ನೀಡಲು ಮುಂದಾಗಿದ್ದು ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಗೆಳತಿ ಯೋಜನೆಯನ್ನು ಇನ್ನಷ್ಟು ವಿಸ್ತರಿಸುತ್ತಿದೆ.
ರೇಷನ್ ಕಾರ್ಡ್ ಬದಲಾವಣೆ ಹಾಗೂ ತಿದ್ದುಪಡಿಗೆ ಅವಕಾಶ! ಇಲ್ಲಿದೆ ಮಹತ್ವದ ಮಾಹಿತಿ
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಾಯಕವಾಗುವಂತೆ ಗೆಳತಿ ಯೋಜನೆಯ ಅಡಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಅಥವಾ ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಧನಸಹಾಯ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಗೆಳತಿ ಯೋಜನೆ (Gelti scheme) ಯ ಅಡಿಯಲ್ಲಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ (acid attack women) ಸ್ವಂತ ಉದ್ಯಮ ಆರಂಭಿಸಲು ತರಬೇತಿಯ ಜೊತೆಗೆ ಐದು ಲಕ್ಷ ರೂಪಾಯಿಗಳ ಸಾಲ ಸೌಲಭ್ಯ ನೀಡಲಾಗುವುದು. ಇದರಲ್ಲಿ 2.25 ಲಕ್ಷ ರೂಪಾಯಿಗಳನ್ನು ಮಾತ್ರ ಮಹಿಳೆಯರು ಪಾವತಿ ಮಾಡಿದ್ರೆ ಸಾಕು ಇನ್ನು ಉಳಿದ 2.25 ಲಕ್ಷ ರೂಪಾಯಿಗಳನ್ನು ಸರ್ಕಾರವೇ ಭರಿಸುತ್ತದೆ.
ಈ ಪಟ್ಟಿಯಲ್ಲಿ ಹೆಸರು ಇದ್ರೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆ ಹಣ ಬರುವುದಿಲ್ಲ!
ಮಹಿಳೆಯರು ಆಫ್ ಲೈನ್ ಮೂಲಕ ಮಹಿಳಾ ಅಭಿವೃದ್ಧಿ ನಿಗಮಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿಳಾಸ!
ವ್ಯವಸ್ಥಾಪಕ ನಿರ್ದೇಶಕರು,
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ,
ಜಯನಗರ ವಾಣಿಜ್ಯ ಸಂಕೀರ್ಣ,
4ನೇ ಬ್ಲಾಕ್, ಜಯನಗರ,
ಬೆಂಗಳೂರು- 560011.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31 2024
Another scheme for women, 2.25 lakh rupees subsidy
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.