ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಅವರು ಹೊಸ ಪಡಿತರ ಚೀಟಿ ವಿತರಣೆ (new ration card distribution)ಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲನೆ ಮಾಡಿ ಅವುಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳುವುದಕ್ಕಾಗಿ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಜಮೀನು, ಆಸ್ತಿ ರಿಜಿಸ್ಟ್ರೇಷನ್ ಮಾಡಿಕೊಳ್ಳುವವರಿಗೆ ಸರ್ಕಾರದಿಂದ ಹೊಸ ರೂಲ್ಸ್!
ಹಳೆಯ ಅರ್ಜಿ ಪರಿಶೀಲನೆ! (Application verification)
ಮೂರು ಲಕ್ಷಕ್ಕೂ ಹೆಚ್ಚಿನ ರೇಷನ್ ಕಾರ್ಡ್ ಅರ್ಜಿಗಳ ಪರಿಶೀಲನೆ ಬಾಕಿ ಇದೆ ಅದರಲ್ಲೂ ಬಿಪಿಎಲ್ (BPL Ration card) ಮತ್ತು ಎಪಿಎಲ್ ಕಾರ್ಡ್ (APL ration card) ಎಂದು ವರ್ಗೀಕರಿಸಬೇಕಾಗುತ್ತದೆ.
ಸಾಕಷ್ಟು ಜನ ಉಳ್ಳವರು ಕೂಡ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದು, ಅಂತಹ ರೇಷನ್ ಕಾರ್ಡ್ ಅರ್ಜಿ ಪರಿಶೀಲಿಸುವುದು ಬಹಳ ಮುಖ್ಯ. ಹೀಗಾಗಿ ಇದೊಂದು ಸುಧೀರ್ಘವಾದ ಪ್ರಕ್ರಿಯೆ ಆಗಿದ್ದು ಮಾರ್ಚ್ 31ರ ಒಳಗೆ ಎಲ್ಲಾ ಅರ್ಜಿ ಪರಿಶೀಲನೆ ಮುಗಿಯುತ್ತದೆ. ಹಾಗೂ ಏಪ್ರಿಲ್ ಒಂದರಿಂದ ಹೊಸ ಕಾರ್ಡ್ ವಿತರಣೆ ಆರಂಭವಾಗುತ್ತದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಭರವಸೆ ನೀಡಿದ್ದಾರೆ.
ನಿಮ್ಮ ಆಸ್ತಿ, ಜಮೀನಿನ ದಾಖಲೆಗಳನ್ನು ಒಂದೇ ಕ್ಲಿಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ! ಡೈರೆಕ್ಟ್ ಲಿಂಕ್
ಇಂದು ಎಲ್ಲಾ ಗ್ಯಾರಂಟಿ ಯೋಜನೆಗಳಿಗೂ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆ, ಅದರಲ್ಲೂ ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇದ್ರೆ ಹೆಚ್ಚು ತಲೆಬಿಸಿ ಇಲ್ದೆ ರೇಷನ್ ಕಾರ್ಡ್ ಪ್ರಯೋಜನ ಪಡೆದುಕೊಳ್ಳಬಹುದು.
ಆದರೆ ಸಾಕಷ್ಟು ಜನರಿಗೆ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ರೇಷನ್ ಕಾರ್ಡ್ ಇಲ್ಲದೆ ಇರುವುದು. ಹಾಗಾಗಿ ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಯ ಜೊತೆಗೆ ಹೊಸ ಅರ್ಜಿ ಸಲ್ಲಿಕೆಗೂ ಕೂಡ ಸರ್ಕಾರ ಅವಕಾಶ ಮಾಡಿಕೊಡಲಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು
ಮನೆಯ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್
ಮನೆಯ ಸದಸ್ಯರ ಬಗ್ಗೆ ವಿವರ
ವಿಳಾಸದ ಪುರಾವೆ
ಪಾಸ್ಪೋರ್ಟ್ ಅಳತೆಯ ಫೋಟೋ
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ (ಆಧಾರ್ ಲಿಂಕ್ ಆಗಿರುವ ಸಂಖ್ಯೆ)
ಮಾರ್ಚ್ ತಿಂಗಳ ಎಲ್ಲಾ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂದಿದ್ಯಾ ಚೆಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ?
ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಎನ್ನುವ ಧೇಯ ವಾಕ್ಯದೊಂದಿಗೆ ಫಲಾನುಭವಿಗಳಿಗೆ ಪಡಿತರ ಚೀಟಿ ವಿತರಣೆ ಮಾಡಲಾಗುತ್ತಿದೆ. ಇನ್ನು ಪಡಿತರ ಚೀಟಿ ಪಡೆದುಕೊಂಡವರು ಸಾಕಷ್ಟು ಜನ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ, ಅಂದರೆ ಅನರ್ಹರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ. ಇಂತಹ ಕಾರ್ಡ್ಗಳನ್ನು ರದ್ದುಪಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಇನ್ನು ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಯಾವುದೇ ಹೆಸರು ಬದಲಾವಣೆ ಇದ್ದರೆ ಅಥವಾ ಸದಸ್ಯರ ಹೆಸರನ್ನು ತೆಗೆದು ಹಾಕುವುದು ಹಾಗೂ ಸೇರಿಸುವ ಅಗತ್ಯ ಇದ್ದರೆ ಮೊದಲಾದ ಬದಲಾವಣೆಗಳನ್ನು ನೀವು ಮಾಡಿಕೊಳ್ಳಬಹುದು, ಇದಕ್ಕಾಗಿ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೂ ಏಪ್ರಿಲ್ ಒಂದರಿಂದ ಅವಕಾಶ ಕಲ್ಪಿಸಿ ಕೊಡಲಿದೆ.
ಬಿಗ್ ಅಪ್ಡೇಟ್! ಇಂತಹ ಮಹಿಳೆಯರಿಗೆ 6 ಮತ್ತು 7ನೇ ಕಂತಿನ ಗೃಹಲಕ್ಷ್ಮಿ ಹಣ ಜಮೆ ಆಗೋಲ್ಲ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ!
https://ahara.kar.nic.in/ ಆಹಾರ ಇಲಾಖೆಯ ಈ ಅಧಿಕೃತ ವೆಬ್ಸೈಟ್ನಲ್ಲಿ ನೀವು ಅರ್ಜಿ ಫಾರಂ ಭರ್ತಿ ಮಾಡಿ ಅಗತ್ಯ ದಾಖಲೆಗಳು ಸ್ಕ್ಯಾನ್ ಕಾಪಿ ಅಪ್ಲೋಡ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
ಆದರೆ ಸಾಕಷ್ಟು ಬಾರಿ ಸರ್ವರ್ ಸಮಸ್ಯೆ (server problem) ಇರುವುದರಿಂದಾಗಿ ನೀವು ಸೇವಾ ಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಯಲ್ಲಿ ಅರ್ಜಿ ಸಲ್ಲಿಸುವುದು ಹೆಚ್ಚು ಸೂಕ್ತ.
Application submission to get new ration card started
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.