ರಾಜ್ಯದ ಜನತೆಗೆ ಮತ್ತೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಡೀಟೇಲ್ಸ್

Story Highlights

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್, ರೇಷನ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ

ನಿಮಗೆ ಎಪಿಎಲ್ (APL), AAY ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕೇ? ಈ ರೇಷನ್ ಕಾರ್ಡ್ ಇಲ್ಲದೆ ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದೀರೇ? ಹಾಗಾದ್ರೆ ಈ ಸುದ್ದಿ ನಿಮಗಾಗಿ..

ರಾಜ್ಯ ಸರ್ಕಾರ (State government) ಜನತೆಗೆ ಗುಡ್ ನ್ಯೂಸ್ ನೀಡಿದ್ದು ಇನ್ನು ಸದ್ಯದಲ್ಲಿಯೇ ರೇಷನ್ ಕಾರ್ಡ್ (Ration Card) ವಿತರಣೆ ಮಾಡುವುದಾಗಿ ಮಾಹಿತಿ ನೀಡಿದೆ. ಇದರ ಜೊತೆಗೆ ಹೊಸ ರೇಷನ್ ಕಾರ್ಡ್ ಗೆ ಅಪ್ಲಿಕೇಶನ್ ಕೂಡ ಹಾಕಬಹುದು ಎನ್ನುವುದು ಖುಷಿಯ ವಿಚಾರ.

ಸರ್ಕಾರದಿಂದ ನೀಡಲ್ಪಡುವ ಉಚಿತ ಪಡಿತರ ವಸ್ತುಗಳನ್ನ ಪಡೆದುಕೊಳ್ಳುವುದರಿಂದ ಹಿಡಿದು ಉಚಿತ ವೈದ್ಯಕೀಯ ಸೇವೆ, ಉಚಿತ ಗ್ಯಾರಂಟಿ ಯೋಜನೆಗಳು ಮೊದಲಾದವುಗಳ ಪ್ರಯೋಜನ ಪಡೆದುಕೊಳ್ಳಲು ಜನರಿಗೆ ಮುಖ್ಯವಾಗಿ ಬೇಕಾಗಿರುವುದೇ ರೇಷನ್ ಕಾರ್ಡ್.

ಗೃಹಲಕ್ಷ್ಮಿ ಹಣ ಇಂತಹ ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ! ಕಾರಣ ಹಾಗೂ ಪರಿಹಾರ ಇಲ್ಲಿದೆ

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಎನ್ನುವುದು ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಅಂದ್ರೆ ಸರ್ಕಾರದ ಪ್ರತಿಯೊಂದು ಯೋಜನೆಗೂ ಕೂಡ ಆಧಾರ್ ಕಾರ್ಡ್ (Aadhaar Card) ಸಲ್ಲಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ರೇಷನ್ ಕಾರ್ಡ್ ಅನ್ನು ಹೊಂದಿರುವುದು.

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಹೆಚ್ಚಿನ ಪ್ರಯೋಜನ ಸಿಗುತ್ತದೆ. ಆದರೆ ಕಳೆದು ಎರಡುವರೆ ವರ್ಷಗಳಿಂದ ಕೇವಲ 57000 ರೇಷನ್ ಕಾರ್ಡ್ ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ವಿಲೇವಾರಿ ಮಾಡಲಾಗಿದೆ. ಹೊರತು 2.95 ಲಕ್ಷ ಪಡಿತರ ಚೀಟಿ ಅರ್ಜಿಗಳಲ್ಲಿ ಇಂದಿಗೂ ಲಕ್ಷಾಂತರ ಅರ್ಜಿಗಳು ನೆನೆಗುದಿಗೆ ಬಿದ್ದಿವೆ.

ಈ ರೀತಿ ರೇಷನ್ ಕಾರ್ಡ್ ಹೊಂದಿಲ್ಲದೆ ಇರುವ ಕುಟುಂಬ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರಕಾರದ ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗದೆ ಚಿಂತಿತರಾಗಿದ್ದಾರೆ. ಇದನ್ನು ಪರಿಗಣಿಸಿರುವ ರಾಜ್ಯ ಸರ್ಕಾರ ಇದೆ ಮಾರ್ಚ್ 31ನೇ ತಾರೀಖಿನ ಒಳಗೆ ಅರ್ಜಿಗಳನ್ನು ಪರಿಶೀಲಿಸಿ, ಏಪ್ರಿಲ್ ಒಂದರಿಂದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಮಾಡಲು ಆರಂಭಿಸಲಾಗುವುದು ಎಂದು ಭರವಸೆ ನೀಡಿದೆ.

ರದ್ದಾದ ಬಿಪಿಎಲ್ ರೇಷನ್ ಕಾರ್ಡ್ ಮರು ವಿತರಣೆಗೆ ಸಿದ್ಧತೆ; ಇಲ್ಲಿದೆ ಮಹತ್ವದ ಮಾಹಿತಿ

BPL Ration Cardಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ!

ಈಗಾಗಲೇ ಸುಮಾರು ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ 700ಕ್ಕೂ ಹೆಚ್ಚಿನ ಮೆಡಿಕಲ್ ಎಮರ್ಜೆನ್ಸಿ ಸಲುವಾಗಿ ರೇಷನ್ ಕಾರ್ಡ್ ವಿತರಣೆ ಮಾಡಲಾಗಿದೆ. ಆದರೆ ಇದರಿಂದ ಎಲ್ಲರೂ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಹೊಸ ಪಡಿತರ ಚೀಟಿ ವಿತರಣೆ ಮಾಡಲು ಹಾಗೂ ಹೊಸ ಅರ್ಜಿಗಳನ್ನು ಸ್ವೀಕರಿಸಲು ಸರ್ಕಾರ ಮುಂದಾಗಿದೆ.

ಹೊಸ ರೇಷನ್ ಕಾರ್ಡ್ ವಿತರಣೆಗೆ ಡೇಟ್ ಫಿಕ್ಸ್; ಬಿಪಿಎಲ್ ಕಾರ್ಡ್ ವಿತರಣೆಗೆ ನಿರ್ಧಾರ

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂತವರಿಗೆ ಅವಕಾಶ!

*ಹೊಸದಾಗಿ ಮದುವೆಯಾಗಿ (newly married couple) ಇನ್ನೊಂದು ಕುಟುಂಬವನ್ನು ಸೇರಿದ ನವದಂಪತಿಗಳು ಮದುವೆಯ ನಂತರ ಬೇರೆ ಮಾಡಿ ವಾಸಿಸುತ್ತಿದ್ದಾರೆ. ಅಂತವರು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು.

ಎರಡನೆಯದಾಗಿ ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಬೇರೆ ಉಳಿದು ಬೇರೆ ಮನೆಯಲ್ಲಿ ವಾಸ ಮಾಡುವವರು ಕೂಡ ಹೊಸ ಪಡಿತರ ಚೀಟಿ ಗಾಗಿ ಅರ್ಜಿ ಸಲ್ಲಿಸಬಹುದು.

ಮುಂದಿನ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬರಬೇಕು ಅಂದ್ರೆ ಈ ಕೆಲಸ ಮಾಡಲೇಬೇಕು!

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ! (Ration card correction)

ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳ ವಿತರಣೆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸ್ವೀಕಾರ ಇವುಗಳ ಜೊತೆಗೆ ಈಗಾಗಲೇ ಇರುವ ರೇಷನ್ ಕಾರ್ಡ್ ನಲ್ಲಿ ಅಗತ್ಯ ಇರುವ ಬದಲಾವಣೆಗೆ ಕೂಡ ಸರ್ಕಾರ ಅವಕಾಶ ಮಾಡಿಕೊಡಲಿದೆ.

ಈ ಮೂಲಕ ತಿದ್ದುಪಡಿ ಮಾಡಿಕೊಳ್ಳಬಹುದಾಗಿದ್ದರೂ ಕೂಡ ಆನ್ಲೈನ್ ಪೋರ್ಟಲ್ ಗಳು ಇಡೀ ದಿನ ಕಾರ್ಯನಿರ್ವಹಿಸುವುದಿಲ್ಲ, ಇಂತಹ ಸಂದರ್ಭದಲ್ಲಿ ನೀವು ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ಆನ್ಲೈನ್ ಪೋರ್ಟಲ್ ತೆರೆದುಕೊಳ್ಳುವ ಸಮಯದಲ್ಲಿ ತಿದ್ದುಪಡಿ ಮಾಡಿಕೊಳ್ಳುವುದು ಸೂಕ್ತ.

apply for New ration card, Here are the details

Related Stories