ಕಬ್ಬು ಬೆಳೆಗಾರರ ಖಡಕ್ ಸಂದೇಶ; ಸರ್ಕಾರಕ್ಕೆ ರೈತರ ಕೊನೆಯ ಡೆಡ್‌ಲೈನ್! ಉಗ್ರ ಹೋರಾಟಕ್ಕೆ ಸಜ್ಜು

Sugarcane Formers: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿರುವ ಬೆಳಗಾವಿ ರೈತರು, ಸರ್ಕಾರಕ್ಕೆ ಅಕ್ಟೋಬರ್ 30ರ ಸಂಜೆ ಐದು ಗಂಟೆಯವರೆಗೆ ಗಡುವು ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಬೆಳಗಾವಿ (Belagavi): ಕಬ್ಬಿಗೆ ಸೂಕ್ತ ಬೆಲೆ ಸಿಗಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿರುವ ರೈತರ (Karnataka Sugarcane Formers) ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಸಕ್ಕರೆ ಕಾರ್ಖಾನೆಗಳಿಗೆ ನೀಡಿದ್ದ ಎರಡು ದಿನಗಳ ಗಡುವು ಮುಗಿದಿದ್ದರೂ ಬೆಲೆ ವಿಚಾರದಲ್ಲಿ ನಿರ್ಧಾರ ಪ್ರಕಟವಾಗದ ಹಿನ್ನೆಲೆಯಲ್ಲಿ, ಇದೀಗ ಸರ್ಕಾರದತ್ತ ರೈತರು ಮುಖ ಮಾಡಿದ್ದಾರೆ.

ಅಕ್ಟೋಬರ್ 30ರ ಸಂಜೆ 5 ಗಂಟೆಯೊಳಗೆ ಬೇಡಿಕೆಗಳ ಬಗ್ಗೆ ತೀರ್ಮಾನ ಕೈಗೊಳ್ಳದಿದ್ದರೆ ರಸ್ತೆ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗುರ್ಲಾಪುರದಲ್ಲಿ ಮಾತನಾಡಿದ ರೈತ ಮುಖಂಡ (Chunappa Pujari), ಕಬ್ಬಿನ ಬೆಲೆ ಕುರಿತು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. ರೈತರು ಮುಂದಿಟ್ಟಿರುವ ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ಗೇಟ್‌ನಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರೈತರಿಗೆ ಮೊದಲ ಕಂತು 2500 ರೂ ಬರ ಪರಿಹಾರ ಬಿಡುಗಡೆ! ಅರ್ಜಿ ಸಲ್ಲಿಸಬೇಕಾ? ಇಲ್ಲಿದೆ ಮಾಹಿತಿ

sugarcane Farmers Protest

ರೈತರ ಬೇಡಿಕೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಿಸಬೇಕು. ರಾಜ್ಯ ಸರ್ಕಾರದಿಂದ ಪ್ರತಿ ಟನ್‌ಗೆ ₹1,000 ಹೆಚ್ಚುವರಿ ಬೆಂಬಲ ನೀಡಬೇಕು. ಇದೇ ವೇಳೆ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹4,500 ಬೆಲೆ ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬೇಡಿಕೆಗಳ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಎಂಬುದು ರೈತರ ಒತ್ತಾಯವಾಗಿದೆ.

ಅಕ್ಟೋಬರ್ 30ರ ಸಂಜೆ 5 ಗಂಟೆಯೊಳಗೆ ಪರಿಹಾರ ಸಿಗದಿದ್ದರೆ ಹೆದ್ದಾರಿ ಬಂದ್ ಮಾಡುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ. ಅಲ್ಲದೆ, ಅಕ್ಟೋಬರ್ 31ರಂದು ಹತ್ತರಗಿ ಟೋಲ್‌ಗೇಟ್ ಬಂದ್ ಮಾಡುವ ನಿರ್ಧಾರವನ್ನೂ ಪ್ರಕಟಿಸಿದ್ದಾರೆ. ಈ ಹೋರಾಟದಲ್ಲಿ ಲಕ್ಷಾಂತರ ರೈತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಚೂನಪ್ಪ ಪೂಜಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಬ್ಬು ಬೆಳೆಗಾರರಿಂದ ಪ್ರತಿ ಟನ್‌ಗೆ ಕನಿಷ್ಠ ₹4,500 ಬೆಲೆ ನಿಗದಿಗೆ ಬೇಡಿಕೆ: ಕೇಂದ್ರ ಸಮಿತಿಗೆ ರೈತರ ಮನವಿ

ಕಬ್ಬಿನ ಬೆಲೆ ವಿಚಾರದಲ್ಲಿ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ಯಾವ ನಿರ್ಧಾರ ಕೈಗೊಳ್ಳುತ್ತವೆ ಎಂಬುದರ ಮೇಲೆ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರವಾಗಲಿದೆ. ನಿಗದಿತ ಗಡುವಿನೊಳಗೆ ಸ್ಪಂದನೆ ಸಿಗದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

TRENDING ARTICLES1 / 5

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories