ರಾಜ್ಯದ ಶಾಲಾ ಮಕ್ಕಳಿಗೆ ಬಿಗ್ ಅಪ್ಡೇಟ್! ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
Covid-19 ಸೋಂಕು ಉಲ್ಬಣ ಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಶಾಲಾ ಮಕ್ಕಳಿಗೆ (school children) ಪ್ರತ್ಯೇಕ ಮಾರ್ಗಸೂಚಿಯನ್ನು ಹೊರಡಿಸಿದೆ
ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ (covid-19) ಎನ್ನುವ ಮಹಾಮಾರಿ ಇಡೀ ವಿಶ್ವವನ್ನೇ ಎಷ್ಟರಮಟ್ಟಿಗೆ ಕಂಗಾಲಾಗಿಸಿತ್ತು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ, ಅದರಲ್ಲೂ ಭಾರತದಲ್ಲಿಯೂ ಕೂಡ ಸಾಕಷ್ಟು ಸಮಸ್ಯೆಗಳನ್ನು ಕ್ರಿಯೇಟ್ ಮಾಡಿದ್ದು, ಲಕ್ಷಾಂತರ ಜನರ ಸಾವು ನೋವುಗಳು ಸಂಭವಿಸಿವೆ.
ಅದೆಷ್ಟೋ ಜನ ಕೆಲಸ ಕಳೆದುಕೊಂಡು ಬೀದಿಗೆ ಬರುವಂತೆ ಆಗಿತ್ತು. ಆದರೆ ಇನ್ನೇನು ಸ್ವಲ್ಪ ಪರಿಸ್ಥಿತಿ ಸುಧಾರಿಸುತ್ತಿದೆ ಎಂದುಕೊಳ್ಳುವಷ್ಟರಲ್ಲಿ ಮತ್ತೆ ಕೋವಿಡ್ ಎನ್ನುವ ಮಹಾಮಾರಿ ದೇಶವನ್ನು ಪ್ರವೇಶಿಸಿದೆ.
ಮುಲಾಜಿಲ್ಲದೆ ಇಂತಹವರ ಬಿಪಿಎಲ್ ರೇಷನ್ ಕಾರ್ಡ್ ರದ್ದು! ಸರ್ಕಾರ ಖಡಕ್ ನಿರ್ಧಾರ
ಕೋವಿಡ್ ಸುರಕ್ಷಿತ ಕ್ರಮಗಳ ಬಗ್ಗೆ ಸರ್ಕಾರದ ಆದೇಶ (Government order regarding covid safety measures)
ಹೌದು, ಮತ್ತೆ ದೇಶದಲ್ಲಿ ಕೋವಿಡ್ ಎನ್ನುವ ಸೋಂಕು ಜನರನ್ನು ಆವರಿಸಿಕೊಳ್ಳುತ್ತಿದೆ, ಈಗಾಗಲೇ ಹಲವು ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ತಪಾಸಣೆ (health checkup and treatment) ಹಾಗೂ ಚಿಕಿತ್ಸೆ ನಡೆಯುತ್ತಿದೆ.
Covid-19 ಸೋಂಕು ಉಲ್ಬಣ ಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಶಾಲಾ ಮಕ್ಕಳಿಗೆ (school children) ಪ್ರತ್ಯೇಕ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (education minister Madhu bangarappa) ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ರೆ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಸಿಗೋಲ್ಲ
ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖೆ ಹೊರಡಿಸಿರುವ ಮಾರ್ಗಸೂಚಿಯನ್ನು ನಾವು ಪರಿಗಣಿಸುತ್ತೇವೆ, ಶಾಲಾ ವಿದ್ಯಾರ್ಥಿಗಳಿಗೆ ಬೇಕಾಗಿರುವ ಅಗತ್ಯವಾಗಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ಕೂಡ ನಡೆಸಲಾಗಿದ್ದು, ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಹೊಸ ಉಪಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಚಿವ ಮಧು ಬಂಗಾರಪ್ಪ ಅವರು ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳ ಪಠ್ಯ ಪರಿಷ್ಕರಣೆ ವಿಚಾರವಾಗಿಯೂ ಮಾತನಾಡಿದ್ದಾರೆ. ಮೈಸೂರು ಟಿಪ್ಪು ಸುಲ್ತಾನ್ ಅವರ ಕುರಿತು ಪಠ್ಯಕ್ರಮದಲ್ಲಿ ಸೇರಿಸುವ ಬಗ್ಗೆ ತಜ್ಞರ ಮಾಹಿತಿಯನ್ನು ಪಡೆದುಕೊಳ್ಳಲಾಗುವುದು, ಯಾವುದೇ ಕಾರಣಕ್ಕೂ ಪಠ್ಯ ತಿರುಚುವ ಪ್ರಯತ್ನ ಮಾಡುವುದಿಲ್ಲ ಎಂದು ಹೇಳಿದ್ದಾರೆ
ಗೃಹಲಕ್ಷ್ಮಿ ಹಣ ಇನ್ಮುಂದೆ ಯಾವುದೇ ಕಾರಣಕ್ಕೂ ಮಿಸ್ ಆಗೋಲ್ಲ; ಹೀಗೆ ಮಾಡಿ ಸಾಕು
ಸಾರ್ವಜನಿಕರಲ್ಲಿ ಸರ್ಕಾರದ ವಿನಂತಿ!
ಸರ್ಕಾರದ ಬಸ್ ಹಾಗೂ ಸಾರ್ವಜನಿಕ ವಾಹನಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ (mask mandatory) ಅದರಲ್ಲೂ ಅರವತ್ತು ವರ್ಷ ಮೀರಿದ ಜನರು ಬಸ್ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಹೆಚ್ಚು ಜನರು ಸೇರುವ ಸ್ಥಳದಲ್ಲಿ ಇರಬೇಕಾದ ಪರಿಸ್ಥಿತಿ ಬಂದರೆ Mask ಧರಿಸಿ ಹಾಗೂ ಸ್ಯಾನಿಟೈಸರ್ (sanitizer) ಬಳಸುವುದನ್ನು ಮರೆಯಬೇಡಿ.
ಅನಗತ್ಯ ಕಾರಣಗಳಿಗಾಗಿ ಮನೆಯಿಂದ ಹೊರಗಡೆ ಸುತ್ತಾಡಬೇಡಿ ಎಂದು ಕ್ರಮವಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಸುತ್ತೋಲೆಯ ಪ್ರಕಾರ ಜನರು ಬಹಳ ಕೇರ್ ಫುಲ್ ಆಗಿ ಇದ್ರೆ ಮತ್ತೆ ಹೊಸ ವೈರಸ್ ನಮ್ಮನ್ನು ಹೆಚ್ಚು ಆವರಿಸದಂತೆ ನೋಡಿಕೊಳ್ಳಬಹುದು.
ಇನ್ಮುಂದೆ ಈ ರೈತರು ತಮ್ಮ ಜಮೀನು, ಆಸ್ತಿ ಮಾರಾಟ ಮಾಡುವಂತಿಲ್ಲ! ಖಡಕ್ ಸೂಚನೆ
Big update for state school children, New guidelines by Govt