ಗೃಹಲಕ್ಷ್ಮಿ 7ನೇ ಕಂತಿನ ಬಗ್ಗೆ ಬೆಳ್ಳಂಬೆಳಗ್ಗೆ ಬಿಗ್ ಅಪ್ಡೇಟ್! ಇಲ್ಲಿದೆ ಮಹತ್ವದ ಮಾಹಿತಿ
ರಾತ್ರೋರಾತ್ರಿ ಸರ್ಕಾರ ಹೊಸ ನಿರ್ಧಾರವನ್ನು ಕೈಗೊಂಡಿದ್ದು, ಇದುವರೆಗೆ ಕೆಲವು ಕಂತಿನ ಹಣ ಮಾತ್ರ ಸಿಕ್ಕಿದ್ದು, 4, 5, 6 ಈ ಮೂರು ಕಂತಿನ ಹಣ ಬಾರದೆ ಇರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
7ನೇ ಕಂತಿನ ಹಣ ಬಿಡುಗಡೆಯ ಜೊತೆಗೆ ಈ ಎಲ್ಲಾ ಕಂತಿನ ಹಣವನ್ನು ಕೂಡ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲೆಗಳು ಕಡ್ಡಾಯ! ಕೂಡಲೇ ಸಿದ್ದಪಡಿಸಿಕೊಳ್ಳಿ
ಗೃಹಲಕ್ಷ್ಮಿ 7ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ?
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಅತಿ ಹೆಚ್ಚು ಅನುದಾನವನ್ನ ಪಡೆದುಕೊಂಡಿರುವ ಯೋಜನೆ ಗೃಹಲಕ್ಷ್ಮಿ ಯೋಜನೆಯಾಗಿದೆ (Gruha Lakshmi Scheme). ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆ 2,000ಗಳನ್ನು ಪ್ರತಿ ತಿಂಗಳು ಉಚಿತವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಆದರೆ ಸಾಕಷ್ಟು ಸಮಸ್ಯೆಗಳಿಂದಾಗಿ ಎಲ್ಲರ ಖಾತೆಗೆ ಹಣ ವರ್ಗಾವಣೆ ಆಗಿಲ್ಲ ಇದರ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಮಾರ್ಚ್ 15, 2024 ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಮಾರ್ಚ್ ತಿಂಗಳ ಕೊನೆಯ ದಿನಾಂಕದ ಒಳಗೆ ಎಲ್ಲಾ ಮಹಿಳೆಯರಿಗೂ ಏಳನೇ ಕಂತಿನ ಹಣ ಜಮಾ ಆಗುತ್ತದೆ.
ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ ಹಣ ಬಂದಿಲ್ವಾ? ಕಾರಣ ಇಲ್ಲಿದೆ
ಇದರ ಜೊತೆಗೆ ಇಲ್ಲಿಯವರೆಗೆ ಮೂರು ಕಂತಿನ ಹಣ ಸಿಕ್ಕಿದ್ದು, ಉಳಿದ ಕಂತಿನ ಹಣ ಯಾವ ಮಹಿಳೆಯ ಖಾತೆಗೆ (Bank Account) ಬಂದಿಲ್ಲವೋ ಅವರಿಗೆ ಒಟ್ಟಾರೆಯಾಗಿ 8,000ಗಳನ್ನು ಜಮಾ ಮಾಡಲು ಸರ್ಕಾರ ನಿರ್ಧರಿಸಿದೆ. ಮಹಿಳೆಯರು ತಮ್ಮ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಂಡರೆ, ಪೆಂಡಿಂಗ್ ಇರುವ ಹಣವನ್ನು ಕೂಡ ಸರ್ಕಾರ ಫಲಾನುಭವಿಗಳ ಖಾತೆಗೆ ಜಮಾ (Money Deposit) ಮಾಡಲಿದೆ.
ಯಾವ ಕಾರಣಕ್ಕೆ ಹಣ ವರ್ಗಾವಣೆ ಆಗಿಲ್ಲ!
* ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇದ್ದರೆ
* ಈಕೆ ವೈ ಸಿ ಅಪ್ಡೇಟ್ ಆಗದಿದ್ದರೆ
* ಎನ್ ಪಿ ಸಿ ಸಿ ಮ್ಯಾಪಿಂಗ್ ಆಗದೆ ಇದ್ದರೆ
* ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಆಗದೆ ಇದ್ದರೆ
* ಎಲ್ಲ ದಾಖಲೆಗಳಲ್ಲಿ ಮಹಿಳೆಯ ಹೆಸರು ಒಂದೇ ತೆರನಾಗಿ ಇಲ್ಲದಿದ್ದರೆ
* ರೇಷನ್ ಕಾರ್ಡ್ ನಲ್ಲಿ ಮಹಿಳೆಯ ಹೆಸರು ಯಜಮಾನಿ ಸ್ಥಾನದಲ್ಲಿ ಇಲ್ಲದೆ ಇದ್ದರೆ
* ಆದಾಯ ತೆರಿಗೆ ಪಾವತಿದಾರರಾಗಿದ್ದು ಅರ್ಜಿಯನ್ನು ಸಲ್ಲಿಸಿದ್ದರೆ
* ಸರ್ಕಾರಿ ನೌಕರಿಯಲ್ಲಿದ್ದು ಅರ್ಜಿಯನ್ನು ಸಲ್ಲಿಸಿದ್ದರೆ
* ಸರ್ವರ್ ಸಮಸ್ಯೆ ಹಾಗೂ ಇತರ ತಾಂತ್ರಿಕ ದೋಷಗಳು
ಇಲ್ಲಿವರೆಗೂ 1 ರೂಪಾಯಿ ಗೃಹಲಕ್ಷ್ಮಿ ಹಣ ಸಿಗಲೇ ಇಲ್ಲ ಅನ್ನೋರಿಗೆ ಬಿಗ್ ಅಪ್ಡೇಟ್
ಈ ಎಲ್ಲಾ ವಿಚಾರಗಳ ಬಗ್ಗೆ ಮಹಿಳೆಯರು ಗಮನಹರಿಸಿ ತಮ್ಮ ಖಾತೆಗೆ ಸಂಬಂಧಪಟ್ಟ ಬದಲಾವಣೆಗಳನ್ನು ತಕ್ಷಣ ಮಾಡಿಕೊಳ್ಳಬೇಕು. ಹೀಗೆ ಮಾಡಿದ್ರೆ ಮುಂದಿನ ಕಂತಿನ ಹಣ ಬಿಡುಗಡೆ ಆಗುತ್ತದೆ. ಇನ್ನು ಬ್ಯಾಂಕ ಖಾತೆಗೆ ಹಣ ಜಮಾ ಆಗದಿದ್ದರೆ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವುದರ ಮೂಲಕ ಗೃಹಲಕ್ಷ್ಮಿ ಹಣ ಬರುವಂತೆ ಮಾಡಿಕೊಳ್ಳಬಹುದು.
big update on Gruha Lakshmi Scheme 7th Installment, Here is information