ಬಿಪಿಎಲ್ ರೇಷನ್ ಕಾರ್ಡ್ ನಿಯಮ ಬದಲಾವಣೆ; ಮೇ 1ರಿಂದ ಹೊಸ ರೂಲ್ಸ್ ಜಾರಿ

ರೇಷನ್ ಕಾರ್ಡ್ (ration card) ಎನ್ನುವುದು ಕರ್ನಾಟಕ ರಾಜ್ಯದಲ್ಲಿ ಮಾತ್ರ ಅಲ್ಲ ದೇಶದ ಇತರ ರಾಜ್ಯಗಳಲ್ಲಿಯೂ ಕೂಡ ಬಹಳ ಮಹತ್ವವನ್ನ ಪಡೆದುಕೊಂಡಿದೆ

ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ (ration card) ಎನ್ನುವುದು ಕರ್ನಾಟಕ ರಾಜ್ಯದಲ್ಲಿ ಮಾತ್ರ ಅಲ್ಲ ದೇಶದ ಇತರ ರಾಜ್ಯಗಳಲ್ಲಿಯೂ ಕೂಡ ಬಹಳ ಮಹತ್ವವನ್ನ ಪಡೆದುಕೊಂಡಿದೆ ಯಾಕಂದ್ರೆ ರೇಷನ್ ಕಾರ್ಡ್ ಇದ್ರೆ ಸುಲಭವಾಗಿ ಹಾಗೂ ಉಚಿತವಾಗಿ ರೇಷನ್ ಪಡೆದುಕೊಳ್ಳಬಹುದು ಮಾತ್ರವಲ್ಲದೆ ಸರ್ಕಾರದ ಬೇರೆ ಬೇರೆ ಯೋಜನೆಗಳ ಪ್ರಯೋಜನಗಳನ್ನು ಕೂಡ ಪಡೆದುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಿದೆ.

ಇನ್ನು ರಾಜ್ಯದ ವಿಚಾರಕ್ಕೆ ಬಂದ್ರೆ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ (BPL card) ಎನ್ನುವುದು ಬಹಳ ಮಹತ್ವವನ್ನು ಪಡೆದುಕೊಂಡಿದೆ ಯಾರ ಬಳಿ ಬಿಪಿಎಲ್ ಕಾರ್ಡ್ ಇಲ್ಲವೋ ಅವರು ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಗಾಗಿ ಕಾದು ಕುಳಿತಿದ್ದಾರೆ.

ರೇಷನ್ ಕಾರ್ಡ್ ನಲ್ಲಿ ಹೊಸ ನಿಯಮಗಳನ್ನು ಕೂಡ ಅನ್ವಯ ಮಾಡಲಾಗುತ್ತಿದ್ದು ಮೇ ಒಂದು 2024 ರಿಂದ ಈ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.

ಬಿಪಿಎಲ್ ರೇಷನ್ ಕಾರ್ಡ್ ನಿಯಮ ಬದಲಾವಣೆ; ಮೇ 1ರಿಂದ ಹೊಸ ರೂಲ್ಸ್ ಜಾರಿ - Kannada News

ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದೆ, ನಿಮ್ಮ ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು! (Eligibility to get ration card)

* ಯಾವುದೇ ಸರ್ಕಾರಿ ನೌಕರಿಯಲ್ಲಿ ಇರಬಾರದು
* ಕುಟುಂಬದ ವಾರ್ಷಿಕ ವರಮಾನ ಒಂದು ಲಕ್ಷವನ್ನು ಮೀರಬಾರದು
* ಕುಟುಂಬದ ವಾರ್ಷಿಕ ವರಮಾನದ ಆಧಾರದ ಮೇಲೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಎನ್ನುವುದನ್ನು ನಿರ್ಧರಿಸಲಾಗುತ್ತದೆ.
* ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ..
* ಭಾರತೀಯ ನಾಗರಿಕರಾಗಿರಬೇಕು ಕರ್ನಾಟಕ ರಾಜ್ಯದಲ್ಲಿ ಅರ್ಜಿ ಸಲ್ಲಿಸುವುದಾದರೆ ಕರ್ನಾಟಕ ರಾಜ್ಯದವರೇ ಆಗಿರಬೇಕು.

ಇನ್ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಪಡೆಯೋಕೆ ಈ ಕೆಲಸ ಮಾಡುವುದು ಕಡ್ಡಾಯ!

BPL Ration Cardಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Needed documents)

ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
ಕುಟುಂಬದ ಸದಸ್ಯರ ಬಗ್ಗೆ ವಿವರ
ಯಜಮಾನನ ಆಧಾರ್ ಕಾರ್ಡ್
ವಿಳಾಸ ಪುರಾವೆ
ಬ್ಯಾಂಕ ಖಾತೆಯ ವಿವರ
ಪಾನ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ

ಹೊಸ ರೇಷನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್; ಏಪ್ರಿಲ್ ತಿಂಗಳ ಲಿಸ್ಟ್ ಬಿಡುಗಡೆ

ಇವಿಷ್ಟು ದಾಖಲೆಗಳು ನಿಮ್ಮ ಬಳಿ ಇದ್ದರೆ ನೀವು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಿ. ಈಗಾಗಲೇ ಅರ್ಜಿ ಸಲ್ಲಿಸಿರುವವರಾಗಿದ್ದರೆ ತಶೀಲ್ದಾರರ ಕಚೇರಿಗೆ ಹೋಗಿ ನಿಮ್ಮ ಹೆಸರು ಲಿಸ್ಟ್ ನಲ್ಲಿ ಇದೆಯಾ ಎನ್ನುವುದನ್ನು ಚೆಕ್ ಮಾಡಿ.

BPL Ration Card Rule Changed, New rules from May 1

Follow us On

FaceBook Google News