ಬೆಳಗಾವಿ ಜಿಲ್ಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 50 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಹಣಕಾಸು ಹಾಗೂ ಆಸ್ತಿ ವಿಚಾರ ಶಂಕೆಯಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ (Belagavi): ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ನಡೆದಿರುವ ಬರ್ಬರ ಹತ್ಯೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರ ಶವ ಪತ್ತೆಯಾಗಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ದುಷ್ಕರ್ಮಿಗಳು ಕಲ್ಮೇಶ್ ಅವರನ್ನು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ. ಘಟನೆ ನಡೆದಿದ್ದು ನಾಲ್ಕು ದಿನಗಳ ಹಿಂದೆ ಎನ್ನಲಾಗುತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶವ ಪತ್ತೆಯಾದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತುಮಕೂರಿನಲ್ಲಿ ಹೋಮ್ ಕೇರ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್ ಸುಮಾರು ಹತ್ತು ದಿನಗಳ ಹಿಂದೆ ಗ್ರಾಮಕ್ಕೆ ಬಂದಿದ್ದರು. ಕಳೆದ ಹತ್ತು ವರ್ಷಗಳಿಂದ ಪತ್ನಿಯಿಂದ ದೂರವಿದ್ದು, ವೃದ್ಧ ತಾಯಿಯೊಂದಿಗೆ ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ತಿಳಿದು ಪತ್ನಿ ಹಾಗೂ ಪುತ್ರ ಕೂಡ ಗ್ರಾಮಕ್ಕೆ ಆಗಮಿಸಿದ್ದಾರೆ.

ಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಹಣಕಾಸು ವ್ಯವಹಾರ, ಆಸ್ತಿ ವಿಚಾರ ಅಥವಾ ವೈಯಕ್ತಿಕ ಸಂಬಂಧಗಳ ಹಿನ್ನೆಲೆ ಇರುವ ಸಾಧ್ಯತೆ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories