ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ! ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಸಾವು

ವಾಡಿ ಪಟ್ಟಣದ ಶ್ರೀನಿವಾಸಗುಡಿ ವೃತ್ತದಲ್ಲಿ ಯಾದಗಿರಿ-ಕಲಬುರಗಿ ಮಾರ್ಗದ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿ (Kalaburagi): ಬುಧವಾರ ಸಂಜೆ ವಾಡಿ ಪಟ್ಟಣದ ಶ್ರೀನಿವಾಸಗುಡಿ ವೃತ್ತದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 22 ವರ್ಷದ ಯುವಕ ಮೃತಪಟ್ಟಿದ್ದಾರೆ. ಯಾದಗಿರಿ-ಕಲಬುರಗಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (Kalyana Karnataka Road Transport) ಹಾಗೂ ಬೈಕ್ ನಡುವೆ ಅಪಘಾತ ನಡೆದಿದೆ.

ಮೃತರನ್ನು ಪಟ್ಟಣದ ಪಿಲಕಮ್ಮ ದೇವಿ ಏರಿಯಾ ನಿವಾಸಿ ಮಹ್ಮದ್ ಯಾಸೀನ್ (Mahmood Yaseen) ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಬಸ್ ಶ್ರೀನಿವಾಸಗುಡಿ ವೃತ್ತದಲ್ಲಿ ತಿರುವು ಪಡೆಯುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಕುಳಿತಿದ್ದ ಮಹ್ಮದ್ ಯಾಸೀನ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್ ಚಲಾಯಿಸುತ್ತಿದ್ದ ಮಹ್ಮದ್ ಶಾಹೀದ್ (Mahmood Shaheed) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ (Wadi Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories